Revenue Facts

ಮತ್ತೆ 21 ತಾಲೂಕುಗಳಲ್ಲಿ ಬರ; ಸಿಎಂ ಸಿದ್ದರಾಮಯ್ಯ ಘೋಷಣೆ

ಮತ್ತೆ 21 ತಾಲೂಕುಗಳಲ್ಲಿ ಬರ; ಸಿಎಂ ಸಿದ್ದರಾಮಯ್ಯ  ಘೋಷಣೆ

ಈ ಹಿಂದೆ ರಾಜ್ಯದ 236 ತಾಲೂಕುಗಳ ಪೈಕಿ ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿತ್ತು. ಈ ಪೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ಅಧಿಕೃತವಾಗಿ ಘೋಷಿಸಿದೆ. ಸಚಿವ ಸಂಪುಟ ಉಪಸಮಿತಿಯ ವರದಿಯ ಆಧಾರ ದಲ್ಲಿ ಹೆಚ್ಚುವರಿ 21 ಬರಪೀಡಿತ ತಾಲೂಕುಗಳನ್ನು ರಾಜ್ಯ ಸರಕಾರ ಅಧಿಕೃತವಾಗಿ ಘೋಷಿಸಿದ್ದು, ಈ ಮೂಲಕ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 216 ತಾಲೂಕುಗಳು ಬರಪೀಡಿತ ತಾಲೂಕುಗಳಾಗಿವೆ.ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರಕಾರ, ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರಕಾರದ ಬರ ಘೋಷಣೆ ಮಾರ್ಗ ಸೂಚಿಯಲ್ಲಿನ ಮಾನದಂಡೆಗಳನ್ವಯ ಜಿಲ್ಲಾಧಿಕಾರಿ ಗಳಿಗೆ ನೀಡಿ ರುವ ಬೆಳೆ ಹಾನಿ ಸಮೀಕ್ಷೆಯ ವರದಿ ಆಧರಿಸಿ   ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಸ್ಪಷ್ಟಪಡಿಸಿಲಾಗಿದೆ. ಕರ್ನಾಟಕದಲ್ಲಿ ಹೊಸದಾಗಿ ಬರ ಪೀಡಿತ ತಾಲೂಕು ಎಂದು ಘೋಷಿಸಿರುವ 21 ತಾಲೂಕುಗಳಲ್ಲಿ ಆ್ಯಪ್ ಮೂಲಕ ತಳಮಟ್ಟದ ನೈಜ ಸ್ಥಿತಿ ಪರಿಶೀಲಿಸಿ ಬರ ಕೈಪಿಡಿ ಅನ್ವಯ ದೃಢೀಕರಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸುತ್ತೋಲೆ ಹೊರಡಿಸಿದೆ.

Exit mobile version