#Drought crop relief #2,000 rupees #deposited # farmers’ accounts
ಬೆಂಗಳೂರು ಜ 08:ರಾಜ್ಯದಲ್ಲಿ ಬರಗಾಲ(drought) ಆವರಿಸಿ, ರೈತರನ್ನು ಕಂಗಾಲಾಗಿಸಿದೆ. ಈ ನಡುವೆ ರೈತರು ಬೆಳೆ ಬೆಳೆಯದೆ ಸಂಕಷ್ಟಕ್ಕೆ ಸಿಲುಕಿ ಪರದಾಡುತ್ತಿದ್ದಾರೆ. ಈ ಬರಗಾಲದಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರ ವಿಪತ್ತು ಪರಿಹಾರ ನಿಧಿಯಿಂದ(State Government Disaster Relief Fund) ₹105 ಕೋಟಿ ಬಿಡುಗಡೆಗೊಳಿಸಿದೆ.ಶನಿವಾರ ಹಣ ರಿಲೀಸ್ ಆಗಿದ್ದರಿಂದ ಇಂದು (ಸೋಮವಾರ) ರೈತರ ಖಾತೆಗೆ ₹2,000 ಜಮೆಯಾಗಲಿವೆ. ಸಿಎಂ ಈ ಹಿಂದೆ ಕೇಂದ್ರ ಸರ್ಕಾರ ಅನುದಾನ(grant) ಬಿಡುಗಡೆ ಮಾಡದಿದ್ದರೂ ರಾಜ್ಯ ವಿಪತ್ತು ನಿಧಿಯಿಂದ ಕೊಡುತ್ತೇವೆಂದು ತಿಳಿಸಿದ್ದರು.ಬರದಿಂದಾಗಿ 42 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆ ನಷ್ಟವಾಗಿದೆ ಮತ್ತು ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಅಧಿಕೃತವಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಸಮರ್ಪಕವಾಗಿ ಆಗಿಲ್ಲ. ಇದರಿಂದ ಬರಗಾಲ ಆವರಿಸಿದೆ. ಈ ಬರಗಾಲದಿಂದ ಕೃಷಿಗೆ ನೀರಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆದ ಬೆಳೆ ಕೈಗೆ ಬಾರದೆ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಬರಗಾಲದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ 2000 ರೂಪಾಯಿ ನೀಡಲು ನಿರ್ಧರಿಸಿದೆ,ಪ್ರತಿ ಹೆಕ್ಟೇರ್‌ಗೆ ಮಳೆಯಾಶ್ರಿತ ಬೆಳೆಗಳಿಗೆ ₹ 8,500, ನೀರಾವರಿ ಬೆಳೆಗಳಿಗೆ ₹ 17,000 ಮತ್ತು ಬಹುವಾರ್ಷಿಕ ಬೆಳೆಗಳಿಗೆ ₹ 22,500 ಪರಿಹಾರ ನಿಗದಿಪಡಿಸಲಾಗಿದೆ. ಅದರಲ್ಲಿ ಮೊದಲ ಕಂತಿನಲ್ಲಿ ₹ 2,000 ಪಾವತಿಸಲಾಗುತ್ತದೆ. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.