ಬೆಂಗಳೂರು: IT Raid; ಚುನಾವಣೆ ತಯಾರಿಯಲ್ಲಿದ್ದ ಕೆಜಿಎಫ್ ಬಾಬು ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು: ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.ಇಂದು ಬೆಳಗ್ಗೆ ಸುಮಾರು 5.30ಕ್ಕೆ ಐಟಿ ಅಧಿಕಾರಿಗಳು ಕೆಜಿಎಫ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಸದ್ಯ ಕೆಜಿಎಫ್ ಬಾಬು ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಜಿಎಫ್ ಬಾಬು ಕಾಂಗ್ರೆಸ್ ಪಕ್ಷದಿಂದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು.ಆದಾಯ ತೆರಿಗೆ ವಂಚನೆ ಹಿನ್ನೆಲೆ ಐಟಿ ಅಧಿಕಾರಿಗಳು ಕೆಜಿಎಫ್ ಬಾಬು ಸೇರಿ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜಧಾನಿ ಬೆಂಗಳೂರಿನ 50 ಕಡೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ.ಚಿಕ್ಕಪೇಟೆ ಅಸೆಂಬ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕೆಜಿಎಫ್ ಬಾಬು, ಕ್ಷೇತ್ರದಲ್ಲಿ ಅನೇಕ ಸಾಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಕಾಂಗ್ರೆಸ್ ಪಕ್ಷವು ಬಾಬುಗೆ ಟಿಕೆಟ್ ನೀಡಲಿಲ್ಲ.ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಅವರ ಪತ್ನಿ ಶಾಝಿಯಾ ತರನ್ನುಮ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.ಈ ವೇಳೆ ಅವರು ತಮ್ಮ ಹಾಗೂ ತಮ್ಮ ಪತಿ ಕೆಜಿಎಫ್ ಬಾಬು ಅವರ ಆಸ್ತಿ ವಿವರ ಘೋಷಿಸಿದ್ದು, ಅವರ ಬಳಿ 1,621 ಕೋಟಿ ರೂ. ಆಸ್ತಿ ಇದೆ ಎಂಬುದು ಬಹಿರಂಗವಾಗಿದೆ. ಕೆಜಿಎಫ್ ಬಾಬು ಹೆಸರಿನಲ್ಲಿ 83.56 ಕೋಟಿ ರೂ.ಗಳ ಚರಾಸ್ತಿ ಇದ್ದು, 1,538.15 ಕೋಟಿ ರೂ. ಬೆಲೆ ಬಾಳುವ ಸ್ಥಿರಾಸ್ತಿಗಳಿವೆ ಎಂದು ಅಫಿಡವಿಟ್‌ನಲ್ಲಿ ಘೋಷಿಸಲಾಗಿದೆ.