ಹಾವೇರಿ;ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್‌ಗೆ ಸೇರಿದ ಹೋಟೆಲ್ ಮೇಲೆ ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿ, ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ. ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ.ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ (Shiggaon) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೋಟೆಲ್ ಮೇಲೆ ಐಟಿ ಇಲಾಖೆ ದಾಳಿ ಮಾಡಿದೆ.
ಬಂಕಾಪುರ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಒಡೆತನದ ಗ್ರ್ಯಾಂಡ್ ಹೋಟೆಲ್ ಮೇಲೆ ಐಟಿ ಅಧಿಕಾರಿಗಳ ಕಣ್ಣು ಬಿದ್ದಿದೆ. ಮತದಾರರಿಗೆ ಹಂಚಲು ಸಂಗ್ರಹಿಸಿ ಇಡಲಾಗಿದೆ ಎನ್ನಲಾಗಿದ್ದು, ಒಂದೊಂದು ಕವರ್‌ನಲ್ಲಿ ಮೂರು ಸಾವಿರ ರೂಪಯಿ ಹಾಕಿಡಲಾಗಿತ್ತು ಎನ್ನಲಾಗಿದೆ.ಯಾಸೀರ್ ಖಾನ್ ಪಠಾಣ್ ಸಿ ಎಂ ಬಸವರಾಜ ಬೊಮ್ಮಾಯಿ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು,ಮೊದಲು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿದ್ದರು.