Revenue Facts

ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯ(ED)ದಾಳಿ

ಬೆಂಗಳೂರು;ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ED ದಾಳಿ ನಡೆದಿದೆ. ಉಷಾ ರಾಮನಾನಿ ಎಂಬ ಉದ್ಯಮಿ ಮನೆ ಮೇಲೆ ದಾಳಿ ನಡೆದಿದ್ದು ಅಧಿಕಾರಿಗಳು ತನಿಖೆ(Investigation) ಆರಂಭಿಸಿದ್ದಾರೆ.ಬೆಂಗಳೂರಿನ ಉದ್ಯಮಿಯೋರ್ವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಕಂಪನಿಗಳ ಎಂಡಿ ಮತ್ತು ಡೈರೆಕ್ಟರ್ ಆಗಿರುವ ಉದ್ಯಮಿಯ ಕಸವಿನಹಳ್ಳಿ ಬಳಿ ಇರುವ ನಿವಾಸದ ಮೇಲೆ ದಾಳಿಯಾಗಿದೆ. ಉಷಾ ರಾಮನಾನಿ 2 ಕಂಪನಿಗಳ ನಕಲಿ ದಾಖಲೆ ಸೃಷ್ಟಿಸಿ ಎಸ್‌ಬಿಐನಿಂದ 354 ಕೋಟಿ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಾಲಗಳನ್ನು 2011-16ರವರೆಗೂ ಪಡೆಯಲಾಗಿತ್ತು. 2019ರಲ್ಲಿ ಈ ಬಗ್ಗೆ ಸಿಬಿಐ ಕೂಡ ದೂರು ದಾಖಲಿಸಿಕೊಂಡಿತ್ತು.ಉದ್ಯಮಿ ಉಷಾ ರಾಮನಾನಿ ಮನೆ ಹಾಗೂ ಕಂಪನಿಗಳ ಕಚೇರಿಗಳ ಮೇಲೆ ದಾಳಿಯಾಗಿದೆ. ಇವರು ಹಲವು ಖಾಸಗಿ ಕಂಪನಿಗಳನ್ನು ಹೊಂದಿರುವ ಬ್ಗಗೆ ಮಾಹಿತಿ ತಿಳಿದುಬಂದಿದೆ. ಒಟ್ಟು 8 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್ 17) ಬೆಳಗ್ಗೆ 5 ಗಂಟೆಗೆ ಏಕಕಾಲದಲ್ಲಿ ದಾಳಿ‌ ನಡೆಸಿದ್ದಾರೆ.ಕಂಪನಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲೋನ್(Loan) ಪಡೆದು ವಂಚನೆ ಮಾಡಿದ್ದಾರೆ ಎನ್ನಲಾಗಿದ್ದು, ಎಸ್ ಬಿಐ ಬ್ಯಾಂಕ್(SBI Bank) ನಿಂದ 354 ಕೋಟಿ ರೂ. ಲೋನ್ ಪಡೆದು ವಂಚಿಸಿದ್ದಾರೆ ಎಂಬ ಆರೋಪವಿದೆ. ಈ ವಂಚನೆ ಪ್ರಕರಣ ಇಡಿಗೆ(ED) ವರ್ಗಾವಣೆಯಾಗಿತ್ತು.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸದ್ಯ ಇಡಿ ಅಧಿಕಾರಿಗಳು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪಿಎಮ್‌ಎಲ್‌ಎ (PMLA) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದೆ.

Exit mobile version