Revenue Facts

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ

#Exemption # compulsory rural #service of doctors

ಬೆಂಗಳೂರು;ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್(Medical course) ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ(Exception) ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಮಂಗಳವಾರ ಈ ಕುರಿತು ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ. ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಡಿಸಿದರು. ತಿದ್ದುಪಡಿ ವಿಧೇಯಕದಲ್ಲಿ(Amendment Bill) ಪ್ರಮುಖವಾಗಿ, ಗ್ರಾಮೀಣ ಸೇವೆ ಸಲ್ಲಿಸಬೇಕು ಎನ್ನುವ ಬದಲು ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಯಲ್ಲಿ ವೈದ್ಯರು ಕಾರ್ಯನಿರ್ವ ನು ಹಿಸಬೇಕು ಎಂದು ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ.ಕೆಲ ವರ್ಷಗಳ ಹಿಂದೆ ಗ್ರಾಮೀಣ ಭಾಗದಲ್ಲಿ ಕಡ್ಡಾಯ ಸೇವೆ ಎನ್ನುವ ಕಾನೂನು ತರಲಾಗಿತ್ತು. ಆದರೆ ಇದರಿಂದ ಗ್ರಾಮೀಣ ಭಾಗದಲ್ಲಿ ವೈದ್ಯರ ಸಂಖ್ಯೆ ಹೆಚ್ಚಾಗಿ, ನಗರ ಭಾಗದ ಆಸ್ಪತ್ರೆಯಲ್ಲಿ ಕೊರತೆ ಕಾಣಿಸಿಕೊಂಡಿತ್ತು. ಇದರಿಂದ ನಗರ ಭಾಗದ ಸರಕಾರಿ ಆಸ್ಪತ್ರೆಯಲ್ಲಿ ಹಲವು ಸಮಸ್ಯೆಯಾಗಿದ್ದರಿಂದ ಇದೀಗ, ಈ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಕಡ್ಡಾಯ ಸೇವೆಯನ್ನು ಕೇವಲ ಗ್ರಾಮೀಣ ಭಾಗಕ್ಕೆ ಮಾತ್ರ ಸೀಮಿತಗೊಳಿಸದೇ, ರಾಜ್ಯ ಸರಕಾ ರ ನಿರ್ದಿಷ್ಟಪಡಿಸಿರುವ ಖಾಲಿ ಹುದ್ದೆಯಲ್ಲಿ ಸೇವೆ ಸಲ್ಲಿಸಬೇಕು ಎಂದು ಹೇಳಲಾಗಿದೆ. ರಾಜ್ಯದಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿರುವ ವೈದ್ಯಕೀಯ ವಿದ್ಯಾರ್ಥಿಗಳು ಎಂಡಿ ಪಡೆದ ಬಳಿಕ ಕಡ್ಡಾಯವಾಗಿ ಸರಕಾರಿ ಸೇವೆ ಸಲ್ಲಿಸ ಬೇಕು ಎನ್ನುವ ಕಾನೂನಿದೆ. ಆದರೆ ಇದೀಗ ರಾಜ್ಯ ಮತ್ತು ಕೇಂದ್ರ ಸರಕಾರ ದ ಸೇವೆಗೆ ಆಯ್ಕೆಯಾದರೆ ಅಂತಹ ವಿದ್ಯಾರ್ಥಿಗಳನ್ನು ಕಡ್ಡಾಯ ಸೇವೆ ಯಿಂದ ವಿನಾಯಿತಿ ನೀಡುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.ಇತ್ತೀಚೆಗೆ ವೈದ್ಯಕೀಯ ಸ್ನಾತಕೋತ್ತರ ಹಾಗೂ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿ ಹೊರಬರುತ್ತಿರುವುದರಿಂದ, ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಒಂದು ವರ್ಷದ ಸೇವೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

Exit mobile version