25.8 C
Bengaluru
Friday, November 22, 2024

ಬೆಂಗಳೂರು ;ನಕಲಿ ಅಂಕಪಟ್ಟಿ ಮಾರಾಟ ಜಾಲ;ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ,

ಬೆಂಗಳೂರು ;ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್‌ ತಯಾರಿಕೆಯ ಬೃಹತ್ ಜಾಲ ಬೆಳಕಿಗೆ ಬಂದಿದ್ದು,, ಎಲ್ಲಾ ವಿಶ್ವವಿದ್ಯಾಲಯಗಳು ಬೆಚ್ಚಿ ಬೀಳುವಂತೆ ಮಾಡಿದೆ.ಈ ಪ್ರಕರಣ ಕುರಿತಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದು ‘ಒಂದೂವರೆ ತಿಂಗಳ ಹಿಂದೆ ನಕಲಿ ಮಾರ್ಕ್ಸ್ ಕಾರ್ಡ್ ದಂಧೆಯನ್ನ ಸಿಸಿಬಿ ಪತ್ತೆ ಮಾಡಿತ್ತು.

ದೇಶದಾದ್ಯಂತ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಮತ್ತು ಇತರ ಸಂಬಂಧಿತ ಪ್ರಮಾಣಪತ್ರಗಳನ್ನು ವಿತರಿಸುವ ನಕಲಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳನ್ನು ವಿತರಿಸುವ ಐದು ಸಂಸ್ಥೆಗಳ ಮೇಲೆ ದಾಳಿ ನಡೆಸಿತು.ದಾಳಿಯ ಸಂದರ್ಭದಲ್ಲಿ 6,800ಕ್ಕೂ ಅಧಿಕ ನಕಲಿ ಅಂಕಪಟ್ಟಿಗಳನ್ನು ವಶಕ್ಕೆ ಪಡೆಯಲಾಗಿದೆ. ಅಣ್ಣಾಮಲೈ ವಿವಿ, ಮಂಗಳೂರು ವಿವಿ, ಬೆಂಗಳೂರು ವಿವಿ, ಕುವೆಂಪು ವಿವಿ, ಗೀತಂ ಯೂನಿವರ್ಸಿಟಿ, ಸಿಕ್ಕಿಂ ಯೂನಿವರ್ಸಿಟಿ ಸೇರಿದಂತೆ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿಗಳು ಪತ್ತೆಯಾಗಿವೆ.15 ವಿಶ್ವ ವಿದ್ಯಾಲಯ ಹಾಗೂ ಸಂಸ್ಥೆಗಳಿಗೆ ಸಂಬಂಧಿಸಿದ ಮಾರ್ಕ್ಸ್ ಕಾರ್ಡ್‌ಗಳಾಗಿದ್ದು ಒರ್ವ ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಯಾರಾದರು ಈ ರೀತಿಯ ನಕಲಿ ಮಾರ್ಕ್ಸ್ ಕಾರ್ಡ್ ಬಳಸುತ್ತಾ ಇದರೆ ಅವರಿಗೆ ಸಂಕಷ್ಟ ಎದುರಾಗಲಿದೆ. ಇಂತಹ ಸಂಸ್ಥೆಗಳಿಂದ ದೂರ ಇರಬೇಕು’ ಎಂದು ಸಾರ್ವಜನಿಕರಲ್ಲಿ ಕಮೀಷನರ್ ಮನವಿ ಮಾಡಿದ್ದಾರೆ. ಬೆಂಗಳೂರಿನ ಹಲವು ಕಾಲೇಜ್‌ಗಳ ಮೇಲೆ ದಾಳಿ ಮಾಡಿ ಸಿಸಿಬಿ ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ ಮಾಡಿತ್ತು. ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ಬರೋಬ್ಬರಿ 6800 ನಕಲಿ ಮಾರ್ಕ್ಸ್ ಕಾರ್ಡ್‌ಗಳು ಪತ್ತೆಯಾಗಿದ್ದು ಈ ವೇಳೆ ಕಂಪ್ಯೂಟರ್ , ಲ್ಯಾಪ್‌ಟಾಪ್ ಹಾಗೂ 13 ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಅವುಗಳನ್ನು ಸಂಬಂಧಿತ ವಿವಿಗಳಿಗೆ ಕಳುಹಿಸಿ ನಕಲಿ ಎಂಬ ಮಾಹಿತಿಯನ್ನು ಸಿಸಿಬಿ ಪೊಲೀಸರು ಪಡೆದುಕೊಂಡಿದ್ದು, ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ಇಂತಹ ಅಂಕಪಟ್ಟಿಗಳನ್ನು ನೀಡಿ ಕೆಲವರು ಉದ್ಯೋಗ, ಬಡ್ತಿ ಪಡೆದುಕೊಂಡಿರುವ ಸಾಧ್ಯತೆ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಹೇಳಲಾಗಿದೆ.ನಕಲಿ ಅಂಕಪಟ್ಟಿ ವಿತರಿಸುವ ಜಾಲದಲ್ಲಿ ಭಾಗಿಯಾಗಿರುವ ಇನ್ನೂ ಕೆಲವು ಆರೋಪಿಗಳು ಇರುವ ಬಗ್ಗೆ ಮಾಹಿತಿ ದೊರೆತಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Related News

spot_img

Revenue Alerts

spot_img

News

spot_img