17.2 C
Bengaluru
Monday, February 10, 2025

ಫ್ಲೆಕ್ಸ ಪೋಸ್ಟರ್ ಗೆ ಕಡಿವಾಣ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು BBMP ಸೂಚನೆ

ಬೆಂಗಳೂರು, ಮಾ.15;ನಗರದಲ್ಲಿನ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅಧಿಕಾರಿ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ಖಡಕ್‌ ಆದೇಶ ನೀಡಿದೆ. ವಾಣಿಜ್ಯ ಉತ್ಪನ್ನ ಮತ್ತು ಸೇವೆಗಳನ್ನು ಒದಗಿಸುವ ಕಂಪನಿ, ಉತ್ಪಾದಕರು ತಮ್ಮ ಉತ್ಪನ್ನಗಳ ಬಗ್ಗೆ ವಾಣಿಜ್ಯ ಜಾಹೀರಾತುಗಳ ಮೂಲಕ ಸಾರ್ವಜನಿಕ ಪ್ರದರ್ಶನ ಮಾಡುವಲ್ಲಿ ಖಾಸಗಿ ಏಜೆನ್ಸಿಗಳು ಅಧಿಕೃತವಾಗಿ ಬಿಬಿಎಂಪಿಯಿಂದ ಪರವಾನಿಗೆ ಪಡೆದು, ವಾಣಿಜ್ಯ ಜಾಹೀರಾತು ಪ್ರದರ್ಶನ ಮಾಡಬೇಕುಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018” ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ ಅನುಮತಿಸಲು ಮಾತ್ರ ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು/ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದ್ದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿರುತ್ತದೆ.

ರಾಜ್ಯ ಸರ್ಕಾರವು ಪರಿಸರ ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದೆ. ಈ ವಿಷಯಗಳ ಕುರಿತು ಈಗಾಗಲೇ ಸರ್ಕಾರದಿಂದ ಮತ್ತು ಪಾಲಿಕೆಯಿಂದ ಮಾಧ್ಯಮಗಳಲ್ಲಿ ಪ್ರಕಟಣೆಗಳನ್ನು ನೀಡಿ ಸಾರ್ವಜನಿಕರಿಗೆ ತಿಳಿಯಪಡಿಸಲಾಗಿದೆ.2012 ಬೆಂಗಳೂರುಈ ವಿಷಯಗಳ ಕುರಿತು ಈಗಾಗಲೇ ಸರ್ಕಾರದಿಂದ ಮತ್ತು ಪಾಲಿಕೆಯಿಂದ ಮಾಧ್ಯಮಗಳಲ್ಲಿ ಪ್ರಕಟಣೆಗಳನ್ನು ನೀಡಿ ಸಾರ್ವಜನಿಕರಿಗೆ ತಿಳಿಯಪಡಿಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಉತ್ಪನ್ನ ಮತ್ತು ಸೇವೆಗಳನ್ನು ಒದಗಿಸುವ ಕಂಪನಿ/ಉತ್ಪಾದಕರು ತಮ್ಮ ಉತ್ಪನ್ನಗಳ ಬಗ್ಗೆ ವಾಣಿಜ್ಯ ಜಾಹೀರಾತುಗಳ ಮೂಲಕ ಸಾರ್ವಜನಿಕ ಪ್ರದರ್ಶನ ಮಾಡುವಲ್ಲಿ ಖಾಸಗಿ ಏಜೆನ್ಸಿಗಳು ಅಧಿಕೃತವಾಗಿ ಬಿಬಿಎಂಪಿಯಿಂದ ಪರವಾನಿಗೆ ಪಡೆದಿರುವ ಏಜೆನ್ಸಿಗಳ ಮೂಲಕ ವಾಣಿಜ್ಯ ಜಾಹೀರಾತು ಪ್ರದರ್ಶನ ಮಾಡಬಹುದಾಗಿದೆ.ಪ್ರಕಟಣಾಗಾರರು/ಮುದ್ರಣಗಾರರು ಮತ್ತು ಸಂಬಂಧಪಟ್ಟ ಅನಧಿಕೃತ ಏಜೆನ್ಸಿಗಳ ಹಾಗೂ ಪ್ಲೆಕ್ಸ್ ಬ್ಯಾನರ್‌ಗಳಲ್ಲಿ ಭಾವಚಿತ್ರವಿರುವ ವ್ಯಕ್ತಿಗಳ ವಿರುದ್ಧ ಕರ್ನಾಟಕ ಮುಕ್ತ ಸ್ಥಳಗಳ ವಿರೂಪಗೊಳಿಸುವಿಕೆ ತಡೆ)1981ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ, 6 ತಿಂಗಳವರೆಗಿನ ಜೈಲುವಾಸ ಅಥವಾ ರೂ.1,000/- ಗಳವರೆಗಿನ ದಂಡ ವಿಧಿಸಲು ಅಥವಾ ಕಾರಾವಾಸದೊಂದಿಗೆ ದಂಡ ವಿಧಿಸುವ ಶಿಕ್ಷೆಗೆ ಗುರಿಪಡಿಸಲಾಗುವುದು.

Related News

spot_img

Revenue Alerts

spot_img

News

spot_img