ಬೆಂಗಳೂರು; ಸದ್ಯಕ್ಕೆ 61 ತಾಲೂಕುಗಳು ಬರದ ಪಟ್ಟಿಗೆ ಸೇರಿವೆ. ಇನ್ನೂ 136 ತಾಲೂಕುಗಳ ಬರ ಅಧ್ಯಯನ ನಡೆಯುತ್ತಿದೆ. ಈ ಅಧ್ಯಯನದ ವರದಿ ಸೇರಿಸಿ ತೀರ್ಮಾನ ಮಾಡುತ್ತೇವೆ ಎಂದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಕಾವೇರಿವಿವಾದದ ಕುರಿತು ಬೆಂಬಲಿಸುವುದಾಗಿ ತಿಳಿಸಿದ ಬಿಜೆಪಿ ಈಗ ಕೆಆರ್ ಎಸ್ ನಲ್ಲಿ ಬಂದು ರೈತರ ಅಹವಾಲುಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ವಿಚಾರವಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ಸಾಮಾನ್ಯ ವರ್ಷಗಳಲ್ಲಿ ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಈ ಯೋಜನೆಗೆ ಸಂಬಂಧಿಸಿದ ಡಿಪಿಆರ್ ನೀಡಲಾಗಿದೆ ಎಂದರು.ಇನ್ನು ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಮಾತನಾಡಿ, ಇದು ಅಸಾಧ್ಯವಾದ ಮಾತು. ಈ ಯೋಚನೆ ಅವೈಜ್ಞಾನಿಕವಾಗಿದೆ ಎಂದರು.ದೇಶದಲ್ಲಿ ಒಂದು ರಾಷ್ಟ್ರ ,ಒಂದು ಚುನಾವಣೆ ಯ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಒಂದು ರಾಷ್ಟ್ರ , ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ. ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವನೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ , ಅಥವಾ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ , ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ ಎಂದರು.