ಬೆಂಗಳೂರು, ಫೆ. 17 : ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ರಾಜ್ಯದ ನೇಕಾರರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗೆ ವಿಶೇಷ ನೆರವು ನೀಡಲು ಜಾರಿಗೊಳಿಸಲಾಗುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ನೇಕಾರ್ ಸಮ್ಮಾನ್ ಯೋಜನೆ ಅಡಿ ಸಹಾಯಧನ ನೀಡಲಾಗುತ್ತಿದೆ. ನೇಕಾರ ಸಮ್ಮಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನ 3,000 ರೂ. ಗಳಿಂದ 5,000 ರೂ. ಗಳಿಗೆ ಹೆಚ್ಚಿಸಲಾಗಿದೆ. ಈ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಮಗ್ಗ ನೇಕಾರರು ಮತ್ತು ಮಗ್ಗ ಪೂರ್ವ ಕಾರ್ಮಿಕರಿಗೂ ಸಹ ನೇಕಾರ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ.
ನೇಕಾರ್ ಸಮ್ಮಾನ್ ಯೋಜನೆಯಿಂದ ಸುಮಾರು 1.5 ಲಕ್ಷ ನೇಕಾರರಿಗೆ ಅನುಕೂಲವಾಗಲಿದ್ದು 75 ಕೋಟಿ ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೇಕಾರರ ಖಾತೆಗೆ ಜಮೆ ಮಾಡಲಾಗಿದೆ. ಈ ಐದು ಹೆಚ್ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ಒದಗಿಸಲಾಗುವುದು ಮತ್ತು Fixed Charges ನಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು.
ನೇಕಾರರ ಪ್ಯಾಕೇಜ್ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಮಾನ್ಯ ವರ್ಗದ ಫಲಾನುಭವಿಗಳಿಂದ ಸ್ಥಾಪಿಸಲಾಗುವ ಅತಿ ಸಣ್ಣ ಘಟಕಗಳಿಗೆ ಒಂದು ಕೋಟಿ ರೂ. ವರೆಗಿನ ಜವಳಿ ಮತ್ತು ಸಿದ್ದ ಉಡುಪು ಘಟಕಗಳಿಗೆ ಶೇ.50 ರಷ್ಟು ಅಥವಾ ಗರಿಷ್ಠ 50 ಲಕ್ಷ ರೂ. ಗಳ ಬಂಡವಾಳ ಸಹಾಯಧನ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿ 2019-24 ಅನ್ನು ಪರಿಷ್ಕರಿಸಲಾಗಿದ್ದು, ಅದರ ಪರಿಣಾಮವಾಗಿ ರಾಜ್ಯದಲ್ಲಿ 4,292 ಕೋಟಿ ರೂ. ಗಳ ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದು, ಇದರಿಂದಾಗಿ ಸುಮಾರು 44,257 ಜನರಿಗೆ ಉದ್ಯೋಗ ಸೃಜನೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.