22.7 C
Bengaluru
Tuesday, June 25, 2024

ಆಗಸ್ಟ್‌ 4 ರಿಂದ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫ್ಲವರ್ ಶೋ

ಬೆಂಗಳೂರು ಆ. 02 :ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧ 214ನೇ ಫಲ ಪುಷ್ಪ ಪ್ರದರ್ಶನದಲ್ಲಿ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಸ್ವಾತಂತ್ರೋತ್ಸವದ ಫಲ ಪುಷ್ಪ ಪ್ರದರ್ಶನವು ಆಗಸ್ಟ್ 4 ರಿಂದ ಆಗಸ್ಟ್ 15ರವರೆಗೂ ಲಾಲ್‌ಬಾಗ್‌ನಲ್ಲಿ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್ ತಿಳಿಸಿದರು.ಸುಮಾರು ಎರಡು ಕೋಟಿಯಷ್ಟು ಪ್ರದರ್ಶನಕ್ಕೆ ವೆಚ್ಚ ಮಾಡುತ್ತಿದ್ದೇವೆ ಎಂದು ತಿಳಿಸಿದರು,ಸುಮಾರು ಎರಡು ಕೋಟಿಯಷ್ಟು ಪ್ರದರ್ಶನಕ್ಕೆ ವೆಚ್ಚದಲ್ಲಿ ನಡೆಸಲಾಗುತ್ತಿರುವ ಪ್ರದರ್ಶನವನ್ನು ಶುಕ್ರವಾರ ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 10 ಲಕ್ಷಕ್ಕೂ ಹೆಚ್ಚು ವೀಕ್ಷಕರು ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದರು.ವಿಧಾನಸೌಧ ನಿರ್ಮಾತೃ ಕೆಂಗಲ್‌ ಹನುಮಂತಯ್ಯನವರ 4 ಅಡಿ ಎತ್ತರದ ಪೀಠದ ಮೇಲೆ 14 ಅಡಿ ಎತ್ತರದ ಬೃಹತ್‌ ಹೂವಿನ ಪ್ರತಿಮೆ ವಿಶೇಷ ಆಕರ್ಷಣೆಯಾಗಿರಲಿದೆ,ಫಲಪುಷ್ಪ ಪ್ರದರ್ಶನ-2023ಕ್ಕೆ ಭದ್ರತೆ ದೃಷ್ಟಿಯಿಂದ 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗುತ್ತಿದೆ. ಜೊತೆಗೆ, 300-400 ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಘುತ್ತಿದೆ.ಕೊಲ್ಕತ್ತ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ ಹೂವುಗಳನ್ನು ತರಲಾಗುತ್ತದೆ. ಒಟ್ಟು 15 ರಿಂದ 17 ಲಕ್ಷ ಹೂಗಳನ್ನ ಬಳಸಿ ಫ್ಲವರ್ ಶೋ ಗೆ ತಯಾರಿ ಮಾಡಲಾಗಿದೆ ಎಂದು ತಿಳಿಸಿದರು.2200 ಚದುರ ಅಡಿಯ ಕಣ್ಮನ ಸೆರೆಯುವ ಮೆಗಾ ಯುರೋಪಿಯನ್ ಫ್ಲೋರಲ್ ಕಾರ್ಪೆಟ್ ಪ್ರದರ್ಶನದ ಕೇಂದ್ರಬಿಂದು ಆಗಲಿದೆ.

ಎಲ್ಲಾ ನಾಲ್ಕು ಕಡೆಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ವಿರಲಿದ್ದು, ವಾರದ ದಿನಗಳಲ್ಲಿ 70 ರೂಪಾಯಿ ಮತ್ತು ರವಿವಾರ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ರಜಾ ದಿನಗಳಲ್ಲಿ 80 ರೂಪಾಯಿ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. 12 ವರ್ಷದ ಕೆಳಗಿನ ಮಕ್ಕಳಿಗೆ 30 ರೂಪಾಯಿ ಪ್ರವೇಶ ಶುಲ್ಕವಿರಲಿದೆ. ಶಾಲಾ ಸಮವಸ್ತ್ರದಲ್ಲಿ ಭೇಟಿ ನೀಡುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

 

Related News

spot_img

Revenue Alerts

spot_img

News

spot_img