Revenue Facts

ಅಕ್ಟೋಬರ್ 13ರ ತನಕ BPL ಕಾರ್ಡ್ ತಿದ್ದುಪಡಿಗೆ ಅವಕಾಶ ಕೊಟ್ಟ ಆಹಾರ ಇಲಾಖೆ

ಅಕ್ಟೋಬರ್ 13ರ ತನಕ BPL ಕಾರ್ಡ್  ತಿದ್ದುಪಡಿಗೆ ಅವಕಾಶ ಕೊಟ್ಟ ಆಹಾರ ಇಲಾಖೆ

ಬೆಂಗಳೂರು;BPL ಕಾರ್ಡ್‌ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ.ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ತೆಗೆಯುವುದು ಅಥವಾ ಸೇರ್ಪಡೆ, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ, ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಬಹುದಾಗಿದೆ.ತಿದ್ದುಪಡಿಗೆ ಅವಕಾಶ ಕೊಟ್ಟಿದ್ದು, 3 ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗದಿತ ದಿನಾಂಕ ನೀಡಿದೆ. ಬೆ.10 ಗಂಟೆಯಿಂದ ಸಂಜೆ 7ವರೆಗೆ ಈ ಸೇವೆ ಪಡೆಯಬಹುದು ಎಂದು ಇಲಾಖೆ ತಿಳಿಸಿದೆ.ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಹಣ ಜಮೆ ಆಗುವಲ್ಲಿ ತೊಂದರೆಯಾಗುತ್ತಿರುವ ಹಿನ್ನೆಲೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

1,ಅ.5 ರಿಂದ 7ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು

2.ಅ.8 ರಿಂದ ಅ.10 ರವರೆಗೆ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಲ್ಲಿ ಅವಕಾಶ.

3.ಅ.11 ರಿಂದ ಅ.13ರವರೆಗೆ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅವಕಾಶ.

Exit mobile version