Revenue Facts

ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರು ಜುಲೈ14;ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಹಣ 43 ಸಾವಿರ ಹಣವನ್ನು ಪಡೆದುಕೊಳ್ಳುತ್ತಿದ್ದ ಕೆ.ಜಿ ಸರ್ಕಲ್ ಬಳಿಯಿರುವ ತಹಸೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ನಿರೀಕ್ಷಕ(Food Inspector) ಮಹಾಂತೇಗೌಡ ಬಿ ಕಡಬಾಳು ಎನ್ನುವವರು,ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಟ್ರೇಡ್​ ಲೈಸೆನ್ಸ್​ ನೀಡಲು ರಂಗದಾಮಯ್ಯ ಎಂಬುವವರ ಬಳಿ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.

ಮುಂಗಡ ಹಣ 43ಸಾವಿರ ಹಣವನ್ನು ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.ಅವರಿಂದ 45 ಸಾವಿರ ರೂ. ಹಣವನ್ನು ಪಡೆಯುವಾಗ ಮಹಂತೇಗೌಡನನ್ನು ಬಲೆಗೆ ಕೆಡವಲು ಲೋಕಾಯುಕ್ತ ತಂಡ ಸ್ಥಳಕ್ಕೆ ಹೋಗಿದ್ದರು.ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಆರೋಪಿ ಫುಡ್ ಇನ್ಸ್ಪೆಕ್ಟರ್​ ಕಾರು ಹತ್ತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸುಮಾರು 15 ಕಿ.ಮೀ ವರೆಗೆ ಹಿಂಬಾಲಿಸಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಲೋಕಾಯುಕ್ತ ಅಧಿಕಾರಿಗಳು ಸುತ್ತುವರೆದಿದ್ದಾರೆ. ಆದಾಗ್ಯೂ ಅಧಿಕಾರಿಗಳ ಮೇಲೆ ವಾಹನವನ್ನು ಚಲಾಯಿಸಲು ಪ್ರಯತ್ನಿಸಿದ್ದರು. ಕೊನೆಗೆ ಮತ್ತೊಂದು ಕಾರನ್ನು ಬಳಸಿ ಅವರನ್ನು ಹಿಡಿದಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು ಪೊಲೀಸರ ಬಂಧನದ ಬಳಿಕ ಲೋಕಾಯುಕ್ತ ಪೊಲೀಸರು ಬಂಧಿತರ ವಿಚಾರಣೆ ನಡೆಸಿದ್ದಾರೆ.

Exit mobile version