25.4 C
Bengaluru
Saturday, July 27, 2024

ಸ್ವಂತ ಕಾರು ಇದ್ದವರಿಗೆ BPL ಕಾರ್ಡ್ ರದ್ದು ;ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು :ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ ಯಲ್ಲೋ ಬೋರ್ಡ್ ಕಾರು ಹೊಂದಿರುವವರ BPL ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ. ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ BPL ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಹೇಳಿದರು.ದುಡಿಮೆಗಾಗಿ ಕಾರು ಖರೀದಿಸಿದವರ ಕಾರ್ಡ್ ನ್ನು ರದ್ದು ಮಾಡಲಾಗುವುದಿಲ್ಲ. ಸ್ವಂತ ಕಾರು ಯಾರು ಹೊಂದಿರುತ್ತಾರೆ ಅವರಿಗೆ BPLಕಾರ್ಡ್ ಅನ್ನು ರದ್ದು ಮಾಡಲಾಗುವುದು ಎಂದು ಆಹಾರ ಸಚಿವ ಮುನಿಯಪ್ಪ ಘೋಷಿಸಿದ್ದಾರೆ.ಸೆಪ್ಟೆಂಬರ್ ನಲ್ಲಿ 10 ಕೆಜಿ ಅಕ್ಕಿ ನೀಡಲು ಚಿಂತನೆ ನಡೆಸಲಾಗುತ್ತಿದ್ದು ಹಣದ ಬದಲು ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ ಹೆಚ್ಚು ದಿನ ಹಣ ನೀಡಲು ಆಗದ ಕಾರಣ ಅಕ್ಕಿ ಜೊತೆ ರಾಗಿ ಜೋಳ ನೀಡಲು ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.ಹೊಸದಾಗಿ BPL​, APL​ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಮಾಡುವುದನ್ನು ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.

Related News

spot_img

Revenue Alerts

spot_img

News

spot_img