ಶಿವಮೊಗ್ಗ;ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.ಜು.21 ರ ಸಂಜೆ 4 ಗಂಟೆಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ವಿಶ್ವವಿದ್ಯಾಲಯ ಮುಖ್ಯ ಆವರಣ, ಇರುವಕ್ಕಿಯಲ್ಲಿ ಆಯೋಜಿಸಲಾಗಿದೆ.ಘಟಿಕೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ ತಿಳಿಸಿದರು.