ಬೆಂಗಳೂರು: ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಅಧಿಕೃತವಾಗಿ ಬಿಜೆಪಿಗೆ ಗುಡ್‌ಬೈ ಹೇಳಿ, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ,ಇಂದು ಅಧಿಕೃತವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪೂರ್ಣಿಮಾ ಮತ್ತು ಡಿ.ಟಿ. ಶ್ರೀನಿವಾಸ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಬಾವುಟ ಹಿಡಿದರು. ತಮ್ಮ ಸಮುದಾಯಕ್ಕೆ ಬಿಜೆಪಿಯಲ್ಲಿ ಸ್ಥಾನಮಾನ ಸಿಗಲಿಲ್ಲ ಎಂದು ಪೂರ್ಣಿಮಾ ಈ ಹಿಂದೆ ಆರೋಪಿಸಿದ್ದರು.ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ನೇತೃತ್ವದಲ್ಲಿ ಪೂರ್ಣಿಮಾ ಶ್ರೀನಿವಾಸ್ , ಪತಿ ಶ್ರೀನಿವಾಸ್ ಹಾಗೂ ನರಸಿಂಹ ನಾಯಕ್ ಸೇರಿ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಆದರೆ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಕಾಡುಗೊಲ್ಲ ಸಮುದಾಯ ವಿರೋಧ ವ್ಯಕ್ತಪಡಿಸಿದೆ.ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಪೂರ್ಣಿಮಾ ಶ್ರೀನಿವಾಸ್, ಕಹಿ ಘಟನೆಗಳಿಂದ ಕಾಂಗ್ರೆಸ್ ಪಕ್ಷವನ್ನು ನನ್ನ ತಂದೆ ತೊರೆದಿದ್ದರು. ಎಲ್ಲರ ಅಪೇಕ್ಷೆ ಮೇರೆಗೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರ್ಪಡೆ ಆಗ್ತಿದ್ದೇವೆ. ಹಿಂದುಳಿದ ವರ್ಗಕ್ಕೆ ರಾಜಕೀಯ ಪ್ರಾತಿನಿಧ್ಯ ಬೇಕು. ಸಿದ್ದಾಂತವನ್ನು ಒಪ್ಪಿನೇ ಕಾಂಗ್ರೆಸ್ ಗೆ ಬಂದಿದ್ದು. ಕಾಂಗ್ರೆಸ್ ರಕ್ತ ನನ್ನಲ್ಲಿ ಇದೆ ಎಂದು ಹೇಳಿದ್ದರು ಹಲವರು. ಕಾಂಗ್ರೆಸ್ ಜೊತೆಗೆ ಮತ್ತೊಂದು ಪಯಣ ಶುರುವಾಗಿದೆ ಎಂದು ತಿಳಿಸಿದರು.ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಸುಧಾಕರ್, ಕಾರ್ಯಾಧ್ಯಕ್ಷ ಚಂದ್ರಪ್ಪ, ಸಲೀಂ ಅಹಮದ್, ಎಂಎಲ್‍ಸಿ ನಾಗರಾಜ್ ಯಾದವ್, ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ, ಎಂಎಲ್‍ಸಿ ನಜೀರ್ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು