25 C
Bengaluru
Monday, December 23, 2024

Nandini Milk Price;ಆ.1ರಿಂದ ನಂದಿನಿ ಹಾಲಿನ ದರ ಲೀ.ಗೆ 3 ರೂ. ಹೆಚ್ಚಳ

ಬೆಂಗಳೂರು: ರಾಜ್ಯಾದ್ಯಂತ ಆಗಸ್ಟ್ ಒಂದರಿಂದ ಪ್ರತಿ ಲೀಟರ್ ನಂದಿನಿ ಹಾಲಿನ ಬೆಲೆ ಮೂರು ರೂ ಹೆಚ್ಚಳವಾಗಲಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಹಾಲಿನ ದರ ಏರಿಸುವ ತೀರ್ಮಾನವನ್ನು ರಾಜ್ಯ ಸರಕಾರ ತೆಗೆದುಕೊಂಡಿದ್ದು, ಪ್ರತಿ ಲೀಟ‌ಗೆ 3 ರು.ನಷ್ಟು ದರ ಏರಿಕೆಯಾಗಲಿದೆ, ಆ 1ರಿಂದ ಹೊಸ ದರ ಅನ್ವಯವಾಗಲಿದೆ.

ಹಾಲಿನ ದರ ಹೆಚ್ಚಳದಿಂದ ಸಂಗ್ರಹವಾಗುವ ಹಣವನ್ನು ಹಾಲು ಉತ್ಪಾದಕರಾದ ರೈತರಿಗೇ ವರ್ಗಾವಣೆ ಮಾಡಬೇಕು ಎಂಬ ಷರತ್ತು ಒಡ್ಡಿದ ಮುಖ್ಯಮಂತ್ರಿಗಳು,ಹಾಲು ಒಕ್ಕೂಟಗಳು ಇದಕ್ಕೆ ಒಪ್ಪಿಗೆ ನೀಡಿದ ನಂತರ ಹಾಲು ದರ ಹೆಚ್ಚಳಕ್ಕೆ ಅನುಮತಿ ನೀಡಿದರು.ಈ ಸಭೆಯಲ್ಲಿ ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, KMF ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಭಾಗವಹಿಸಿದ್ದರು.

Related News

spot_img

Revenue Alerts

spot_img

News

spot_img