21.1 C
Bengaluru
Monday, July 8, 2024

ಗದಗ: ನಗರಸಭೆ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

#gadag #roadworksbill #assistantengineer #lokayukta

ಗದಗ: ರಸ್ತೆ ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ನಗರಸಭೆ ಸಹಾಯಕ ಇಂಜಿನಿಯರ್ ​ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಗದಗ ಬೆಟಗೇರಿ ನಗರಸಭೆ (ಜೆಇ) ವಿರೇಂದ್ರ ಸಿಂಗ್ ಕಾಟೆವಾಲೆ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.ಜೆ.ಇ.ವಿರೇಂದ್ರ ಅವರು ನಗರಸಭೆ ವ್ಯಾಪ್ತಿಯ ಕಾಮಗಾರಿಯ ಬಿಲ್ ಪಡೆಯಲು ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಗುತ್ತಿಗೆದಾರನಿಂದ 1 ಲಕ್ಷ 50 ಸಾವಿರ ರೂಪಾಯಿ ಹಣ ಪಡೆದಿದ್ದಾರೆ.ಗುತ್ತಿಗೆದಾರ ಅಬ್ದುಲ್ ಮನಿಯಾರ್ ಎಂಬುವರ ಒಂಬತ್ತು ಲಕ್ಷ ರೂ. ಮೊತ್ತದ ಮೂರು ಬಿಲ್ ಪಾಸ್ ಮಾಡಲು ಒಂದೂವರೆ ಲಕ್ಷ ಹಣ ಕೇಳಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತರ ತಂಡ ದಾಳಿ ಮಾಡಿ ಹಣ ಸಮೇತ ವಶಕ್ಕೆ ಪಡೆದಿದ್ದಾರೆ.

ಲಂಚ ಪಡೆದ ಇಂಜಿನಿಯರ್ ಕಾಟೇವಾಲ ಅವರು, ಹಣವನ್ನು ಬೈಕಿನಲ್ಲಿ ಇಟ್ಟಿದ್ದರು. ನಂತರ ಲೋಕಾಯುಕ್ತರಿಗೆ ಹಣ ಹಸ್ತಾಂತರ ಮಾಡಿದ್ದಾರೆ. ಎಸ್​’ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್​’ಪಿ ಶಂಕರ ಎಮ್ ರಾಗಿ ಅವರ ಮಾರ್ಗದರ್ಶನದಲ್ಲಿ ಇನ್ಸ್‌’ಪೆಕ್ಟರಗಳಾದ ರವಿ ಪುರುಷೋತ್ತಮ್, ಅಜೀಜ ಅವರ ನೇತೃತ್ವದಲ್ಲಿ ದಾಳಿ .ಸಿಬ್ಬಂದಿಗಳಾದ ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್, ಮುತ್ತುರೆಡ್ಡಿ ಬಾರಡ್ಡಿ, ಗುಬ್ಬಿ, ಅಯ್ಯನಗೌಡರ, ವಿರೂಪಾಕ್ಷ ಅರಿಷಿಣದ ಹಾಗೂ ವಾಹನ ಚಾಲಕರಾದ ನೈನಾಪೂರ ಹಾಗೂ ಹೆಬ್ಬಳ್ಳಿ ಈ ಕಾರ್ಯಾಚರಣೆಯಲ್ಲಿ ಇದ್ದರು.

Related News

spot_img

Revenue Alerts

spot_img

News

spot_img