20.3 C
Bengaluru
Friday, December 27, 2024

ಹೊಸ ವರ್ಷಕ್ಕೆ ನಂದಿಗಿರಿಧಾಮಕ್ಕೆ ಹೋಗೊರಿಗೆ ಜಿಲ್ಲಾಡಳಿತ ಶಾಕ್..!

ಹೊಸ ವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ…

ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ…!

ಹೊಸ ವರ್ಷದ ದಿನ ನಂದಿ ಬೆಟ್ಟಕ್ಕೆ ಹೋಗಿ ಪುಲ್‌ಎಂಜಾಯ್ ಮಾಡಬೇಕು ಅಂದುಕೊಂಡೋರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫುಲ್ ಶಾಕ್ ನೀಡಿದೆ… ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ..

ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್..!

ಇದರಿಂದಾಗಿ ನಂದಿ ಹಿಲ್ಸ್​​ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ…!

ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ನಂದಿಗಿರಿಧಾಮದಲ್ಲಿ ಡಿಸೆಂಬರ್​ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ತಾಕೀತು ಮಾಡಲಾಗಿದೆ.

Related News

spot_img

Revenue Alerts

spot_img

News

spot_img