#Good News # BPL card holders #ration card #distribution within 15 days
ಬೆಂಗಳೂರು;ಹೊಸದಾಗಿ ಪಡಿತರ ಚೀಟಿಗಾಗಿ(Rationcard) ಬಂದ 2.95 ಲಕ್ಷ ಅರ್ಜಿಗಳನ್ನು 15 ದಿನದೊಳಗೆ ಪರಿಶೀಲಿಸಿ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿ, ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಪ್ರಯುಕ್ತ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಕಾರ್ಡ್ ನೀಡುವುದನ್ನು ನಿಲ್ಲಿಸಲಾಗಿತ್ತು.ಸದ್ಯ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದ್ದು, 5 ಕೆಜಿ ಅಕ್ಕಿಯ ಹಣದ ಬದಲು ಅಕ್ಕಿ ನೀಡಲು ಶೀಘ್ರ ಕ್ರಮಕೈಗೊಳ್ಳಲಾಗುವುದು. ಅಕ್ಕಿ ಖರೀಧಿಗಾಗಿ ತೆಲಂಗಾಣ ಆಂಧ್ರ ಮತ್ತು ಛತ್ತೀಸ್‌ಗಢದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ 15 ದಿನದೊಳಗೆ ರೇಷನ್ ಕಾರ್ಡ್ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ರಾಜ್ಯದಲ್ಲಿ 1.16 ಕೋಟಿ ಪಡಿತರ ಚೀಟಿಗಳಿದ್ದು, 4 ಕೋಟಿ ಫಲಾನುಭವಿಗಳಿದ್ದಾರೆ. ಈ ತಿಂಗಳು ₹644 ಕೋಟಿ ಹಣ ಪಡಿತರದಾರರ ಖಾತೆಗೆ ಜಮೆ ಮಾಡಲಾಗಿದೆ ಎಂದಿದ್ದಾರೆ