e-commerce workers# ₹ 4 lakh #insurance #announced # government
ಇ ಕಾಮರ್ಸ್ ಕಾರ್ಮಿಕ ನೌಕರರಿಗೆ ರಾಜ್ಯ ಸರ್ಕಾರ ಈಗ ಜೀವ ವಿಮಾ ಸೌಲಭ್ಯ ಹಾಗೂ ಅಪಘಾತ ಪರಿಹಾರ ವಿಮಾ ಸೌಲಭ್ಯವನ್ನು ಜಾರಿಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಭರ್ಜರಿ ಸಿಹಿಸುದ್ದಿ ನೀಡಿದೆ.ಸರ್ಕಾರದಿಂದ 14 ಲಕ್ಷ ವಿಮೆ ಘೋಷಣೆ ಸೇರಿದಂತೆ ಎಲ್ಲಾ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷ ವಿಮೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ರೂಪಿಸಲಾಗಿತ್ತು. ವಿಮೆ ಯೋಜನೆ ನೀಡುವುದಾಗಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. 74 ಲಕ್ಷ ವಿಮೆಯಲ್ಲಿ 12 ಲಕ್ಷ ಅಪಘಾತ, 12 ಲಕ್ಷ ಜೀವವಿಮೆ ಸೇರಿರಲಿದೆ. ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆಯಬಹುದು. ಇದರಿಂದ ಅಮೆಜಾನ್, ಫ್ಲಿಪ್ ಕಾರ್ಟ್, ಸ್ವಿಗ್ಗಿ, ಬಿಗ್ ಬಾಸ್ಕೆಟ್‌ನಂತಹ ಕ್ಷೇತ್ರಗಳಲ್ಲಿ ಪೂರ್ಣಕಾಲಿಕ ಹಾಗೂ ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಈ ವಿಮಾ ಸೌಲಭ್ಯದ (Insurance Policy) ಆದೇಶ ಅನ್ವಯ ಆಗುತ್ತದೆ. ಗಿಕ್ ಕಾರ್ಮಿಕರುಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಠಿಯಿಂದ ರೂ.2 ಲಕ್ಷಗಳ ಜೀವ ವಿಮಾ ಸೌಲಭ್ಯ ಹಾಗೂ ರೂ.2 ವಕ್ಷಗಳ ಅಪಘಾತ ಪರಿಹಾರವಾಗಿ ವಿಮಾ ಸೌಲಭ್ಯ ಸೇರಿದಂತೆ ಒಟ್ಟು 4 ಲಕ್ಷಗಳ ವಿಮಾ ಸೌಲಭ್ಯವನ್ನು ಒದಗಿಸುವ ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕ ವಿಮಾ ಯೋಜನೆಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಜಾರಿಗೊಳಿಸಲು ಅನುಮೋದಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದಿದ್ದಾರೆ.