Revenue Facts

ರೈತರಿಗೆ ಗುಡ್ ನ್ಯೂಸ್:ತಲಾ ₹2,000 ಬರ ಪರಿಹಾರ ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಲೆದೂರಿರುವ ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ತುರ್ತು ಪತ್ರಿಕಾಗೋಷ್ಠಿ ಮಾಹಿತಿ ನೀಡಿದ ಅವರು,  ರಾಜ್ಯದ 223 ತಾಲೂಕುಗಳನ್ನು ಬರ ಘೋಷಣೆಯಾಗಿದ್ದು, 48.19 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಬರ ಪರಿಹಾರ ವಿಚಾರದಲ್ಲಿ ಕೇಂದ್ರಕ್ಕೆ CM ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ. ಬೆಳೆನಷ್ಟ ಪರಿಹಾರವನ್ನು ಕೇಂದ್ರ, ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರದಿಂದಲೇ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ₹2,000 ವರೆಗೆ ಪರಿಹಾರ ಬಿಡುಗಡೆ ಮಾಡಲಾಗುವುದು. ಮೂರ್ನಾಲ್ಕು ದಿನಗಳಲ್ಲಿ ಹಣ ವರ್ಗಾವಣೆಯಾಗಲಿದೆ ಎಂದು CM ಘೋಷಣೆ ಮಾಡಿದ್ದಾರೆ. ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆಯಾಗಿದ್ದು, 48.19 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2,000 ರೂ.ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.ರೈತನಿಗೆ ಕನಿಷ್ಠ ₹1,000 ನೀಡಲಾಗುವುದು ಎಂದು ಸ್ಪಷ್ಟಪಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಕೆಲವು ರೈತರು ಕೇವಲ ಅರ್ಧ ಎಕರೆಯನ್ನು ಹೊಂದಿರಬಹುದು ಮತ್ತು ₹2,000 ಪರಿಹಾರಕ್ಕೆ ಅರ್ಹರಾಗಿರುವುದಿಲ್ಲ. ರೈತರ ಜಮೀನಿನ ಹಿಡುವಳಿ, ಮೊತ್ತವನ್ನು ಪಾವತಿಸಲಾಗುವುದು.ಎಂದು ಸೂಚಿಸಿದ ಮುಖ್ಯಮಂತ್ರಿ, ರಾಜ್ಯವು ಕೇಂದ್ರದಿಂದ ಎನ್‌ಡಿಆರ್‌ಎಫ್(NDRF) ನಿಯಮಗಳ ಪ್ರಕಾರ ₹ 18,171.44 ಕೋಟಿ ಆರ್ಥಿಕ ಪರಿಹಾರವನ್ನು ಕೋರಿದೆ ಮತ್ತು ಬೆಳೆ ನಷ್ಟ ಪರಿಹಾರವನ್ನು ಕೋರಲಾಗಿದೆ ಎಂದು ಹೇಳಿದರು.

Exit mobile version