20.5 C
Bengaluru
Tuesday, July 9, 2024

ಪದವೀಧರರಿಗೆ ಶುಭ ಸುದ್ದಿ : 2024ರ ಜನವರಿ 12ರಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ

#Youth fund scheme # launched # Shimoga # 12th January 2024

ಬೆಂಗಳೂರು;ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿಗೂ ಡಿ.26ರಿಂದ ಚಾಲನೆ ನೀಡಲಾಗುತ್ತಿದೆ. ಡಿ.26ರಂದು ಯುವನಿಧಿ ಯೋಜನೆಯ ನೋಂದಣಿಗೆ​ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್​​ನಲ್ಲಿ ಚಾಲನೆ ನೀಡಲಿದ್ದಾರೆ.ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶರಣು ಪ್ರಕಾಶ್​ ಪಾಟೀಲ್​ ತಿಳಿಸಿದ್ದಾರೆ.
ಪದವೀಧರರಿಗೆ ₹3,000 & ಡಿಪ್ಲೊಮಾದವರಿಗೆ ₹1,500 ನೀಡುವ ಈ ಯೋಜನೆಯನ್ನು ಸೇವಾ ಸಿಂಧು ಪೋರ್ಟಲ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆ ಜಾರಿಗೆ ಮೂಹೂರ್ತ ಕೂಡಿ ಬಂದಿದ್ದು, 2024ರ ಜನವರಿ 12ರಂದು ಶಿವಮೊಗ್ಗದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ .ಡಿಸೆಂಬರ್​ 21ರಂದು ಸರ್ಕಾರ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆಸಿತ್ತು.ಯುವನಿಧಿ ಯೋಜನೆಗೆ ಕರ್ನಾಟಕ ರಾಜ್ಯಾದ್ಯಂತ ಒಟ್ಟು 5.29,153 ಫಲಾನುಭವಿಗಳು ಇರುವುದನ್ನು ಅಂದಾಜಿಸಲಾಗಿದೆ. ಅವರಲ್ಲಿ ಪದವೀಧರರು 4,81,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರು 48,153 ಆಗಿದ್ದಾರೆ. ನಿರುದ್ಯೋಗ ಭತ್ಯೆ ನೀಡಲು 250 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ.

ಈ ಯೋಜನೆ ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಅನ್ವಯಿಸುತ್ತದೆ ಮತ್ತು 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು.ನಿರುದ್ಯೋಗಿ ಪದವೀಧರರಿಗೆ ಯೋಜನೆಯಡಿ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ.ಯುವನಿಧಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ, ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.ಅರ್ಜಿದಾರರು ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ (E-KYC ಕಡ್ಡಾಯ), ಪದವಿ/ ಡಿಪ್ಲೊಮಾ ಅಂಕಪಟ್ಟಿ (2023ರಲ್ಲಿ ಮುಗಿಸಿರಬೇಕು), 6 ತಿಂಗಳಾದರೂ ಉದ್ಯೋಗ ಸಿಗದವರು ಅರ್ಹರು.

Related News

spot_img

Revenue Alerts

spot_img

News

spot_img