17.4 C
Bengaluru
Tuesday, December 24, 2024

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ:ಏಳನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ಆರು ಸಾವಿರ ಕೋಟಿ ರೂ,ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು, ಫೆ. 18- ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಬಜೆಟ್ ನಲ್ಲಿ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದುಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.2023-24 ನೇ ಸಾಲಿನ ಮುಂಗಡ ಪತ್ರ ಮಂಡಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಏಳನೇ ವೇತನ ಆಯೋಗದ ಅನುಷ್ಠಾನದ ಕುರಿತು ಬಜೆಟ್​​ನಲ್ಲಿ ಆ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಇದಕ್ಕೆ ಸಿಎಂ ಪ್ರತಿಕ್ರಿಯಿಸಿದ್ದು, ಏಳನೇ ವೇತನ ಆಯೋಗದ ವರದಿ ಶೀಘ್ರವೇ ಬರಲಿದೆ. ಈ ವರ್ಷದ ಬಜೆಟ್‌ನಲ್ಲಿ‌ 6 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಈ ವರ್ಷವೇ 7ನೇ ವೇತನ ಆಯೋಗದ ವರದಿ ಅನುಷ್ಠಾನ ಮಾಡುತ್ತೇವೆ.ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು,ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು.ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related News

spot_img

Revenue Alerts

spot_img

News

spot_img