27.7 C
Bengaluru
Wednesday, July 3, 2024

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ!ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ

ಬೆಂಗಳೂರು;ಏಪ್ರಿಲ್‌ 1ರಿಂದ ಜಾರಿಗೆ ಬರುವಂತೆ ಶೇಕಡಾ 3.5ರಷ್ಟು ತುಟ್ಟಿಭತ್ಯೆ (Deaness Allowance) ಹೆಚ್ಚಿಸಲು ಆದೇಶಿಸಲಾಗಿದೆ. ತುಟ್ಟಿಭತ್ಯೆ ಪ್ರಮಾಣವನ್ನು ಶೇ. 38.75ರಿಂದ ಶೇ. 42.50ಕ್ಕೆ ಹೆಚ್ಚಿಸಲಾಗಿದೆ.ನಿವೃತ್ತ ರಾಜ್ಯ ಸರ್ಕಾರಿ ನೌಕರರನ್ನು ಒಳಗೊಂಡು UGC ICR ಮತ್ತು ಜಿಲ್ಲಾ ಪಂಚಾಯತ್‌ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಈ ವೇತನ ಹೆಚ್ಚಳ ಅನ್ವಯವಾಗಲಿದೆ.ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು 46%ರಿಂದ 50%ಕ್ಕೆ ಏರಿದೆ. 2024ರ ಜ.1ರಿಂದ ಪೂರ್ವಾನ್ವಯವಾಗುವಂತೆ, ತುಟ್ಟಿಭತ್ಯೆ ಹೆಚ್ಚಿಸಿದೆ.ಇದರಿಂದ ಪ್ರತಿ ವರ್ಷ ₹1792.71 ಕೋಟಿ ಗಮನಾರ್ಹ ಆರ್ಥಿಕ ಬದ್ಧತೆಯನ್ನು ಪ್ರತಿನಿಧಿಸುತ್ತದೆ. ನಮ್ಮ ಉದ್ಯೋಗಿಗಳಿಗೆ ನಮ್ಮ ಸಮರ್ಪಣೆಯನ್ನು ಪುನರುಚ್ಚರಿಸುತ್ತದೆ ಎಂದು CM ಕಚೇರಿ ಟ್ವಿಟ್ಟರ್ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಂಡಿದೆ.ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡಬಹುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತ್ತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.ತುಟ್ಟಿಭತ್ಯೆ ಬಾಕಿ ಮೊತ್ತವನ್ನು 2024ರ ಮಾರ್ಚ್ ತಿಂಗಳ ವೇತನ ಬಡವಾಡೆಗೂ ಮೊದಲು ಪಾವತಿ ಮಾಡತ್ತಕ್ಕದ್ದಲ್ಲ. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಆರ್ಥಿಕ ಇಲಾಖೆಯ (ಸೇವೆಗಳು-2) ಸರ್ಕಾರದ ಜಂಟಿ ಕಾರ್ಯದರ್ಶಿ ಉಮಾ.ಕೆ ಅವರು ಹೊರಡಿಸಿದ ಆದೇಶದಲ್ಲಿ ಸ್ಪಷ್ಟನೆ ನೀಡಲಾಗಿದೆ.

State-govemployees-DA-Kan-GO-3 (1)

Related News

spot_img

Revenue Alerts

spot_img

News

spot_img