26.7 C
Bengaluru
Sunday, December 22, 2024

ರಾಜ್ಯದ ಜನತೆಗೆ ಶುಭಸುದ್ದಿ:ಗೃಹ ಆರೋಗ್ಯ’ ಹೊಸ ಯೋಜನೆ

ಬೆಂಗಳೂರು;ರಾಜ್ಯದ ಜನತೆಗೆ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ಸರಕಾರ ಘೋಷಿಸಿದ್ದ ಕಾರಣ ರಾಜ್ಯದ ಜನತೆ ಕೈ ಗೆ ಬೆಂಬಲ ನೀಡಿದ್ದರು. ಇನ್ನು ಕಾಂಗ್ರೆಸ್ ತನ್ನ ಅಧಿಕಾರವನ್ನು ಆರಂಭಿಸಿದಾಗಿಂದ ಘೋಷಣೆ ಹೊರಡಿಸಿದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯದಲ್ಲಿ ತೊಡಗಿಕೊಂಡಿದೆ.ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ, ಅನ್ನ ಭಾಗ್ಯ, ಗೃಹ ಜ್ಯೋತಿ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳು ಪಡೆಯುತ್ತಿದ್ದಾರೆ. ಇನ್ನು ಗೃಹ ಲಕ್ಷ್ಮಿ ಯೋಜನೆಗಳ ಲಭ್ಯ ಆಗಸ್ಟ್ 31 ರಂದು ಅರ್ಹ ಫಲಾನುಭವಿಗಳಿಗೆ ಸಿಗಲಿದೆ. ಕಾಂಗ್ರೆಸ್ ಸರ್ಕಾರ ಘೋಸಿರುವ ಉದ್ಯೋಗ ಭತ್ಯೆ ಯೋಜನೆಯಾಗಿರುವ ಯುವ ನಿಧಿ ಸದ್ಯದಲ್ಲೇ ಘೋಷಣೆಯಾಗಲಿದೆ.ಈಗಾಗಲೇ ಯುವ ನಿಧಿ ಯೋಜನೆ ಅರ್ಹತೆಯ ಬಗ್ಗೆ ಅಪ್ಡೇಟ್ ನೀಡಲಾಗಿದೆ. ಸರ್ಕಾರದ ಎಲ್ಲ ಯೋಜನೆಗಳ ಲಾಭ ಪಡೆಯುತ್ತಿರುವ ಜನತೆಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಉಚಿತ ಯೋಜನೆಗಳ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಇನ್ನೊಂದು ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಈ ಯೋಜನೆಯಡಿ ಕೋಟ್ಯಂತರ ಜನರು ಲಾಭ ಪಡೆದುಕೊಳ್ಳಬಹುದಾಗಿದೆ.

ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧಿ ಒದಗಿಸುವ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.ಜನರಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳಿಗೆ ಉಚಿತ ಔಷಧಿಯನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆ ರೂಪಿಸಲು ಚಿಂತನೆ ನಡೆಸಿದೆ. ಈ ಯೋಜನೆಯಡಿ ಆರೋಗ್ಯ ಸಿಬ್ಬಂಧಿ ಎಲ್ಲ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಕುಟುಂಬದ ಸದ್ಯಸ್ಯರನ್ನು ತಪಾಸಣೆ ನಡೆಸಲಿದ್ದಾರೆ.ಬಿಪಿ, ಮಧುಮೇಹ ಸೇರಿದಂತೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧ ನೀಡಲಿದ್ದು, ಸಂಕೀರ್ಣ ಕಾಯ್ದೆಗಳನ್ನು ಪತ್ತೆ ಹಚ್ಚಿ ಗಂಭೀರ ಸಮಸ್ಯೆ ಇದ್ದವರನ್ನು ಗುರುತಿಸಿ ಸೂಕ್ತ ಚಿಕೆತ್ಸೆಗೆ ಶಿಫಾರಸ್ಸು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದ್ದಾರೆ.ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಇದನ್ನು ಜಾರಿಗೊಳಿಸಲಿದ್ದು, ನಂತರ ಉಳಿದ ಜಿಲ್ಲೆಗಳಲ್ಲಿಯೂ ವಿಸ್ತರಿಸಲಾಗುವುದು. ಗೃಹ ಆರೋಗ್ಯ ಯೋಜನೆ ಅಡಿ ಆರೋಗ್ಯ ಸಿಬ್ಬಂದಿ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಕುಟುಂಬ ಸದಸ್ಯರನ್ನು ತಪಾಸಣೆ ನಡೆಸಲಿದ್ದಾರೆ.

Related News

spot_img

Revenue Alerts

spot_img

News

spot_img