#Good news # people # state# Property #registration # allowed # home# Minister Krishna Byre Gowda
ರಾಜ್ಯ ಸರ್ಕಾರ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024(State Government Stamp Amendment Bill) ಮಂಡನೆ ಮಾಡಿದೆ. ಇದರಿಂದ ಉಪನೋಂದಣಿ ಕಚೇರಿ ಅಲೆದಾಟಕ್ಕೆ ವಿರಾಮ ಬೀಳಲಿದ್ದು, ಮನೆಯಿಂದಲೇ ನೋಂದಣಿ(Registration) ಸೌಲಭ್ಯ ಪಡೆಯಬಹುದಾಗಿದೆ. ಇದರಿಂದ ಮಾರಾಟಗಾರರು & ಕೊಳ್ಳುವವರ ಉಪಸ್ಥಿತಿ ಇಲ್ಲದೆ, ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಇನ್ನು, ಅಕ್ರಮ ಮತ್ತು ಹಣ ಸೋರಿಕೆ ತಡೆಗೆ ಪೇಪರ್ ಖಾತಾ ನೋಂದಣಿಗೆ ತಡೆ ನೀಡಲು ವಿಧೇಯಕದಲ್ಲಿ ತಿದ್ದುಪಡಿ ತರಲಾಗಿದ್ದು, ಇನ್ಮುಂದೆ ನೋಂದಣಿಗೆ ಇ-ಆಸ್ತಿ ಕಡ್ಡಾಯವಾಗಿದೆ.ನೋಂದಣಿ ಪ್ರಕ್ರಿಯೆಯಲ್ಲಿ ನಾಗರೀಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಮಂಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಅದರಲ್ಲಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ತಾವೂ ಇರುವ ಕಡೆಯಿಂದಲೆ ತಾಂತ್ರಿಕವಾಗಿ ಆಸ್ತಿ ನೋಂದಣಿ(Property registration) ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರುಮಾಹಿತಿ ನೀಡಿದರು.ಇ-ಆಸ್ತಿ ಮೂಲಕ ಖಾತೆ ಆಗಿದ್ದರೆ ಮಾತ್ರ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹೌಸಿಂಗ್ ಬೋರ್ಡ್ ಹಾಗೂ ಕಾವೇರಿ ಡೇಟಾಬೇಸ್‌ನಿಂದ ನಿಜವಾದ ಖಾತಾ ಪರಿಶೀಲನೆ ನಡೆಸಿದ ನಂತರವೇ ನೋಂದಣಿ ಮುಂದುವರೆಯಲಿದೆ. ಆ ಮೂಲಕ ಇ-ಖಾತಾವನ್ನು ನೀಡಲಾಗುವುದು.