ಬೆಂಗಳೂರು;ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧಪಟ್ಟಂತೆ ರಚಿಸಿರುವ 7ನೇ ವೇತನ ಆಯೋಗದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿ, ಮುಂದಿನ ನವೆಂಬರ್ ಒಳಗೆ 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಸಲಿದ್ದು, ಅದರ ಜಾರಿ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ವರದಿ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ನಿರ್ಧಾರ ಕೈಗೊಳ್ಳುವುದಾಗಿ ಈಗಾಗಲೇ ಭರವಸೆ ನೀಡಿದ್ದು, ನೌಕರರು ಆತಂಕಪಡಬೇಡಿ ಅದನ್ನು ಜಾರಿಗೆ ತರಲಾಗುವುದು ಎಂದು ಪರಮೇಶ್ವರ್ ಹೇಳಿದರು. ತಿಳಿಸಿದ್ದಾರೆ.ರಾಜ್ಯ ಸರ್ಕಾರಿ ನೌಕರರ ಬಹು ದಿನದ ಬೇಡಿಕೆ ಹಳೆ ಪಿಂಚಣಿ ಯೋಜನೆ(OPS) ಈಡೇರಿಸಲು ಸರ್ಕಾರ ಬದ್ಧವಾಗಿರೋದಾಗಿ ಹೇಳಿದ್ದಾರೆ.ನೂತನ ಪಿಂಚಣಿ ಯೋಜನೆ(NPS)ಗೆ ಒಳಪಟ್ಟಿರುವ ರಾಜ್ಯ ಸರ್ಕಾರಿ ನೌಕರರನ್ನು ಹಳೇ ಪಿಂಚಣಿ ವ್ಯವಸ್ಥೆ(OPS) ಒಳಪಡಿಸುವ ಬೇಡಿಕೆ ಈಡೇರಿಸಲು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ರಚಿಸಲಾಗಿರುವ ಸಮಿತಿ ವರದಿ ಬಂದ ಕೂಡಲೇ ಕ್ರಮ ವಹಿಸಲಾಗುವುದು ಅಂತ ಹೇಳಿದರು.ರಾಜ್ಯ ಸರ್ಕಾರಿ ನೌಕರರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಅಂತ ಹೇಳಿದರು.ಶಾಸಕರಾದ ಎಂ.ಟಿ.ಕೃಷ್ಣಪ್ಪ, ಬಿ.ಸುರೇಶ್‌ಗೌಡ, ಜಿ.ಬಿ.ಜೋತಿಗಣೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಲಸಿ ಮುದ್ದಿನೇನಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿ.ಪಂ ಸಿಇಒ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಎಸ್ಪಿ ಕೆ.ವಿ.ಅಶೋಕ್, ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನರಸಿಂಹರಾಜು ಮೊದಲಾದವರು ಉಪಸ್ಥಿತರಿದ್ದರು.