19.1 C
Bengaluru
Wednesday, December 18, 2024

ಸರ್ಕಾರಿ ಜಮೀನಿನಲ್ಲಿ ಅಕ್ರಮ-ಸಕ್ರಮ’ ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದವರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿಕೊಂಡಿರುವ ಮನೆಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು,ನಿವೇಶನ ಹಕ್ಕುಪತ್ರ ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಅವಕಾಶ ನೀಡಿದೆ.

ಈ ಮೊದಲು ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದವರಿಗೆ ಇದನ್ನು ಅಡಮಾನ ಮಾಡಬಾರದೆಂಬ ಷರತ್ತನ್ನು ವಿಧಿಸಲಾಗಿತ್ತು. ಅಲ್ಲದೆ ಇದನ್ನು ಹಕ್ಕುಪತ್ರದಲ್ಲಿ ಸಹ ಮುದ್ರಿಸಲಾಗಿತ್ತು. ಹೀಗಾಗಿ ಫಲಾನುಭವಿಗಳು ಬ್ಯಾಂಕ್ ಮೂಲಕ ಸಾಲ ಪಡೆಯಲು ಹೋದರೆ ತೊಂದರೆಯಾಗುತ್ತಿತ್ತು.ಇದೀಗ ರಾಜ್ಯ ಸರ್ಕಾರವು ನಿವೇಶನ ಹಕ್ಕುಪತ್ರ ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಅವಕಾಶ ನೀಡಿದೆ.ರಾಜ್ಯ ಸರ್ಕಾರವು ಗೃಹ ನಿರ್ಮಾಣ ಅಡಮಾನ ಸಾಲಕ್ಕೆ ಯಾವುದೇ ನಿರ್ಬಂಧ ವಿಧಿಸದೆ ಬ್ಯಾಂಕಿನಲ್ಲಿ ಸಾಲ ನೀಡುವಂತೆ ಆದೇಶ ಹೊರಡಿಸಲಾಗಿದೆ.ಈ ಮೂಲಕ ಅಕ್ರಮ-ಸಕ್ರಮ ನಿವೇಶನ ಯೋಜನೆಯಡಿ ಹಕ್ಕುಪತ್ರ ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಅವಕಾಶ ಲಭ್ಯವಾದಂತಾಗಿದೆ.

 

 

 

.

Related News

spot_img

Revenue Alerts

spot_img

News

spot_img