Revenue Facts

ಕಾರ್ಮಿಕರಿಗೆ ಗುಡ್ ನ್ಯೂಸ್ ;ಕಾರ್ಮಿಕರ ಕೆಲಸದ ಅವಧಿ ಇಳಿಕೆ ಸಿಎಂ ಭರವಸೆ

#Good news for workers# CM promises #reduction # working hours # workers

ಬೆಂಗಳೂರು: ಕೆಲಸದ ಅವಧಿ 12 ಗಂಟೆಯಿಂದ 8 ಗಂಟೆಗೆ ಇಳಿಕೆಗೆ ರಾಜ್ಯ ಸರ್ಕಾರ(Stategovernment) ನಿರ್ಧಾರ ಮಾಡಿದೆ. ವಿವಿಧ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ(Trade union organization) ಸಮನ್ವಯ ಸಮಿತಿಯ ನಾಯಕರೊಂದಿಗಿನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕೆಲಸದ ಅವಧಿ ಕಡಿಮೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಬಿಜೆಪಿ(BJP) ಅವಧಿಯಲ್ಲಿ 8 ಗಂಟೆ ಅವಧಿಯನ್ನ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 12 ಗಂಟೆಯಿಂದ 8 ಗಂಟೆಗೆ ಇಳಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ತಿಳಿಸಿದ್ದಾರೆ.ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಹಾಗೂ ಮಹಿಳಾ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿಯ ನಾಯಕರುಗಳು, ಪದಾಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದರು.ಈ ಸಭೆಯಲ್ಲಿ ಕಾರ್ಮಿಕ ಮುಖಂಡರಿಗೆ ಕೆಲಸದ ಅವಧಿ ಕಡಿಮೆ ಮಾಡುವುದಾಗಿ ಭರವಸೆ ನೀಡಿದರು.ರೈತರ ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಬಿಜೆಪಿ ಸರ್ಕಾರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಹೆಚ್ಚಿಸಿತ್ತು. ಇದೀಗ 12 ಗಂಟೆಯಿದ ಮತ್ತೆ 8 ಗಂಟೆಗೆ ಇಳಿಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ.ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಭೆಯಲ್ಲಿ ಭಾಗಿಯಾಗಿದ್ದರು.

Exit mobile version