#Good news # state government # Grilahakshmi #beneficiaries
ಬೆಂಗಳೂರು;ಗೃಹಲಕ್ಷ್ಮಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಯೋಜನೆಗೆ ಹಣದ ಕೊರತೆ ಇದೆ ಎಂಬ ಸುದ್ದಿಯನ್ನು ತಳ್ಳಿ ಹಾಕಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಒಂದೆರಡು ದಿನ ವಿಳಂಬವಾದರೂ ಪ್ರತಿ ತಿಂಗಳು ಸಹ ಯಜಮಾನಿಯರ ಖಾತೆಗೆ ಹಣ ಜಮೆಯಾಗುತ್ತಿದೆ ಎಂದಿದ್ದಾರೆ.ಈಗಾಗಲೇ ರಾಜ್ಯದಲ್ಲಿ 70 % ಮಹಿಳೆಯರಿಗೆ ಯೋಜನೆಯ ಹಣ ಜಮಾ ಆಗಿದ್ದರು, ಇನ್ನೂ 30 % ಮಹಿಳೆಯರಿಗೆ ಹಣ ಜಮಾ ಆಗುವುದು ಬಾಕಿ ಇದೆ. ಸದ್ಯ ಯೋಜನೆಯಿಂದ ಅರ್ಹರು ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸರ್ಕಾರ ಪದೇ ಪದೇ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡುತ್ತಿದೆ. ಇದೀಗ ಮತ್ತೆ November 1 ರಿಂದ ಪಡಿತರ ಚೀಟಿ ತಿದ್ದುಪಡಿಗೆ ಸರಕಾರ ಅವಕಾಶ ಕೊಟ್ಟಿದೆ. ಗೃಹ ಲಕ್ಷ್ಮಿ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಅರ್ಹರ ಖಾತೆಗೆ ಹಣ ಜಮಾ ಮಾಡುವಂತೆ ಮಾಡಲು ಸರ್ಕಾರ ಪರ್ಯಾಯ ಮಾರ್ಗವನ್ನು ಕಂಡು ಹಿಡಿದಿದೆ,ಬ್ಯಾಂಕ್ ಖಾತೆ ಸಮಸ್ಯೆ ಇದ್ದರೆ, ಪೋಸ್ಟ್ ಆಫೀಸ್‌ನಲ್ಲಿ ಖಾತೆ ತೆರೆದು ಹಣ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದೀಗ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗದೆ ಇರುವ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.