22.3 C
Bengaluru
Thursday, June 20, 2024

ಸಾರಿಗೆ ನಿಗಮಗಳಿಗೆ ‘ಶಕ್ತಿ’ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು ಆ 2;ಕಾಂಗ್ರೆಸ್ ಸರ್ಕಾರ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್‌ಗಳಲ್ಲಿ ವಿತರಿಸಲಾಗಿರುವ ಟಿಕೆಟ್‌ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯಟಿಕೆಟ್ ದರ 6,87,49,57,753 ರೂ. ಆಗಿದ್ದು, ಈ ಮೊತ್ತದ ಒಂದು ಪಾಲನ್ನು  ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 47. 15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) 21. 85 ಕೋಟಿ ರೂ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWRTC) 32.57 ಕೋಟಿ ರೂ.,ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 23.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.ನಾಲ್ಕು ನಿಗಮಗಳಿಗೂ ಪ್ರತ್ಯೇಕವಾಗಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.ಜೂನ್‌ 11ರಂದು ಯೋಜನೆ ಆರಂಭಗೊಂಡಾಗ ಸರಾಸರಿ 55 ಲಕ್ಷವಿದ್ದ ಉಚಿತವಾಗಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ಈಗ ಸರಾಸರಿ 62ರಿಂದ 65 ಲಕ್ಷಕ್ಕೆ ಹೆಚ್ಚಳವಾಗಿದೆ.ಶಕ್ತಿ ಯೋಜನೆಗೆ ಸರ್ಕಾರದಿಂದ ಕೊಡಬೇಕಾಗಿರುವ ಅನುದಾನವನ್ನು ಪ್ರತಿ ತಿಂಗಳ ಮೊದಲ ವಾರ ನೀಡಲು ನಿರ್ಧರಿಸಲಾಗಿದೆ. ಜೂನ್‌ ತಿಂಗಳ ಮೊತ್ತ ಆಗಸ್ಟ್‌ ಮೊದಲ ವಾರ ಪಾವತಿಯಾಗಲಿದೆ. ನಿಗಮಗಳಿಗೆ ಆರ್ಥಿಕ ಸಂಕಷ್ಟ ಎದುರಾಗದಂತೆ ಕ್ರಮವಹಿಸಲಾಗುತ್ತದೆ.ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ

Related News

spot_img

Revenue Alerts

spot_img

News

spot_img