Revenue Facts

9 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಗೃಹ ಆರೋಗ್ಯ ಯೋಜನೆ ಜಾರಿಗೆ ಸರಕಾರ ಚಿಂತನೆ

9 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಗೃಹ ಆರೋಗ್ಯ ಯೋಜನೆ ಜಾರಿಗೆ ಸರಕಾರ ಚಿಂತನೆ

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗಾಗಿ ಹೊಸ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ. ರಾಜ್ಯದ BPL ಪಡಿತರ ಚೀಟಿದಾರರು ಕಾಂಗ್ರೆಸ್ ಸರ್ಕಾರ ನೂತನ ಆರೋಗ್ಯ ಸೌಲಭ್ಯವನ್ನು ಪಡೆದುಕೊಳ್ಲಬಹುದು,ಜನರಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳಿಗೆ ಉಚಿತ ಔಷಧಿಯನ್ನು ಒದಗಿಸುವ ‘Gruha Arogya’ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆ ರೂಪಿಸಲು ಚಿಂತನೆ ನಡೆಸಿದೆ.ರಾಜ್ಯದ ಜನತೆಗೆ ಸರ್ಕಾರ ಐದು ಉಚಿತ ಯೋಜನೆಗಳ ಜೊತೆಗೆ ಗೃಹ ಆರೋಗ್ಯ ಯೋಜನೆಯ ಲಾಭವನ್ನು ಕೂಡ ಪಡೆಯಬಹುದಾಗಿದೆಗೃಹ ಆರೋಗ್ಯ ಯೋಜನೆ ಮೂಲಕ ಮನೆ ಮನೆಗೆ ತೆರಳಿ ಆರೋಗ್ಯ ಭಾಗ್ಯವನ್ನು ನೀಡಲು ರಾಜ್ಯ ಸರಕಾರ ಮುಂದಾಗಿದೆ. ಕರ್ನಾಟಕದಲ್ಲಿ 30 ವರ್ಷ ಮೇಲ್ಪಟ್ಟವರಿಗೆ ಈ ಯೋಜನೆಯ ಲಾಭ ಸಿಗಲಿದೆ. ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ನಡೆಸಿ ಅಗತ್ಯವಿದ್ದವರಿಗೆ ಔಷಧ ಕಿಟ್‌ಗಳನ್ನು ನೀಡಲಾಗುತ್ತದೆ. ಈ ಗೃಹ ಆರೋಗ್ಯ ಯೋಜನೆಯನ್ನು ಪ್ರಾಥಮಿಕ ಹಂತದಲ್ಲಿ ನಾಲ್ಕು ವಿಭಾಗಗಳಲ್ಲಿ ಒಂಬತ್ತು ಜಿಲ್ಲೆಗಳಲ್ಲಿ ಜಾರಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.ತುಮಕೂರು, ರಾಮನಗರ, ಗದಗ, ಬೆಳಗಾವಿ, ಬಳ್ಳಾರಿ, ಕಲಬುರಗಿ, ಯಾದಗಿರಿ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳ್ಳಲಿದೆ. ಯಶಸ್ಸಿನ ಬಳಿಕ ರಾಜ್ಯಾದ್ಯಂತ ಯೋಜನೆಯನ್ನು ವಿಸ್ತರಣೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. 2024ರ ಜನವರಿ ವೇಳೆಗೆ ಮೊದಲ ಹಂತದ ತಪಾಸಣೆ ಕಾರ್ಯವನ್ನು ಆರೋಗ್ಯ ಅಧಿಕಾರಿಗಳ ತಂಡ ನಡೆಸಲಿದೆ ಎಂದು ಅಂದಾಜಿಸಲಾಗಿದೆ.ಸಮುದಾಯ ಆರೋಗ್ಯ ಅಧಿಕಾರಿ, ಆಶಾ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಆರೋಗ್ಯ ಅಧಿಕಾರಿಗಳನ್ನು ಒಳಗೊಂಡಂತೆ 2-4ಜನರ ತಂಡವು ಇದರಲ್ಲಿ ಕಾರ್ಯನಿರ್ವಹಣೆ ಮಾಡಲಿವೆ. ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಈ ಯೋಜನೆಯು ಜಾರಿಗೆ ಬರುತ್ತಿದೆ ಎಂದು ತಿಳಿದುಬಂದಿದೆ,

Exit mobile version