25.1 C
Bengaluru
Thursday, November 21, 2024

ಚುನಾವಣಾ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಸಂಭಾವನೆ, ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಏ.13 ರಿಂದ ಪ್ರಾರಂಭವಾಗಿದ್ದು ಏಪ್ರಿಲ್​ 20ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಚುನಾವಣಾ ಭತ್ಯೆ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ,ಈ ಹಿನ್ನಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆ ಪ್ರಸ್ತಾವನೆಯಲ್ಲಿ 2023ನೇ ವಿಧಾನಸಭಾ ಚುನಾವಣಾ ಕರ್ತವ್ಯಕ್ಕೆ ನೇಮಿಸಲ್ಪಡುವ ವಿವಿಧ ಹುದ್ದೆಯ ಅಧಿಕಾರಿ, ಸಿಬ್ಬಂದಿಗಳ ಸಂಭಾವನೆ, ಚುನಾವಣಾ ಭತ್ಯೆಯನ್ನು ಪರಿಷ್ಕರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.ಚುನಾವಣಾ ಕರ್ತವ್ಯಕ್ಕೆ ನೇಮಿಸಲ್ಪಡುವ ವಿವಿಧ ಹುದ್ದೆಯ ಅಧಿಕಾರಿ, ಸಿಬ್ಬಂದಿಯವರುಗಳಿಗೆ ಸಂಭಾವನೆ, ಚುನಾವಣಾ ಭತ್ಯೆ ದರಗಳನ್ನು ಈ ಕೆಳಕಂಡಂತೆ ಪರಿಷ್ಕರಿಸಿರುವುದಾಗಿ ತಿಳಿಸಿದ್ದಾರೆ.

ಪರಿಷ್ಕೃತ ಸಂಭಾವನೆ, ಚುನಾವಣಾ ಭತ್ಯೆ
ಡಿಎಸ್ಪಿ ಹಾಗೂ ಈ ಹಂತದ ಅಧಿಕಾರಿಗಳಿಗೆ ಒಂದು ಬಾರಿಗೆ ರೂ.7,000
ಪೊಲೀಸ್ ಇನ್ಸ್ ಪೆಕ್ಟರ್ ರೂ.700 ಪ್ರತಿ ದಿನಕ್ಕೆ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೂ.500 ಪ್ರತಿದಿನಕ್ಕೆ
ಎಎಸ್‌ಐ, ಹೆಡ್ ಕಾನ್ಸ್ ಸ್ಟೇಬಲ್, ಪೊಲೀಸ್ ಕಾನ್ಸ್ ಸ್ಟೇಬಲ್ ಗಳಿಗೆ ಪ್ರತಿ ದಿನಕ್ಕೆ ರೂ.500
ಲಂಚ್, ಲೈಟ್ ರಿಫ್ರೆಷ್ಮೆಂಟ್ ಗೆ ಪ್ರತಿ ಅಧಿಕಾರಿ, ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಗಳಿಗೆ. ಫಾರೆಸ್ಟ್ ಗಾರ್ಡ್, ಗ್ರಾಮ ರಕ್ಷಾ ದಳ, ಎನ್ ಸಿಸಿಯವರಿಗೆ ಪ್ರತಿ ದಿನಕ್ಕೆ ರೂ.250 ಹೆಚ್ಚಿಸಿ ಆದೇಶಿಸಲಾಗಿದೆ.

Related News

spot_img

Revenue Alerts

spot_img

News

spot_img