26.9 C
Bengaluru
Friday, July 5, 2024

SC ST ಮೀಸಲಾತಿ ಹೆಚ್ಚಳವು ಸೇರಿದಂತೆ 5 ಮಸೂದೆಗಳ ಮಂಡನೆಗೆ ಸರ್ಕಾರ ತೀರ್ಮಾನ

ಬೆಂಗಳೂರು(ಡಿ.20):ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿ ನಾಲ್ಕು ಮಸೂದೆ ಮಂಡನೆಯಾಗಲಿವೆ.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿ.19 ರಿಂದ ಹತ್ತು ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜತೆಗೆ ವಿನೂತನ ಹಾಗೂ ಪ್ರಥಮ ಬಾರಿಗೆ ಕ್ಯೂಆರ್‌ ಕೋಡ್‌ ಆಧಾರಿತ ಗುರುತಿನ ಚೀಟಿ ನೀಡಲು ಜಿಲ್ಲಾಡಳಿತ ಕ್ರಮಕೈಗೊಂಡಿದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇ 6ರಷ್ಟು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಈ ಹಿಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿತ್ತು.

ಹದಿನೈದನೇ ವಿಧಾನಸಭೆಯ ಹದಿನಾಲ್ಕನೇ ಅಧಿವೇಶನ ಇದಾಗಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ಸದನದ ಕಲಾಪ ಆರಂಭವಾಗಲಿದೆ. ಈ ತಿಂಗಳ 30ರವರೆಗೆ ಅಧಿವೇಶನದ ಕಲಾಪ ನಡೆಯಲಿದೆ. ಪರಿಶಿಷ್ಟಜಾತಿ ಮತ್ತು ಪಂಗಡಕ್ಕೆ ಮೀಸಲಾತಿ, ಪಂಚಮಸಾಲಿಗೆ ಮೀಸಲಾತಿ, 40 ಪರ್ಸೆಂಟ್‌ ಸರ್ಕಾರ, ಗಡಿ ವಿವಾದ, ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಬಿಜೆಪಿಗೆ ರೌಡಿಗಳ ಸೇರ್ಪಡೆ, ನೀರಾವರಿ ಯೋಜನೆಗಳ ಜಾರಿಯಲ್ಲಿ ವಿಳಂಬ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಿದ್ದತೆ ಕೈಗೊಂಡಿವೆ.

ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ

ಜೆಡಿಎಸ್‌ನ ಬಂಡೆಪ್ಪ ಕಾಶೆಂಪುರ ಅವರು ಮಾತನಾಡಿ, ಉತ್ತರಕರ್ನಾಟಕ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಯಬೇಕು. ಪ್ರತಿ ಸಲ ಅಧಿವೇಶನ ನಡೆದಾಗಲೂ ಈ ಭಾಗದ ಸಮಸ್ಯೆಗಳ ಬಗ್ಗೆ ಆದ್ಯತೆ ಸಿಗುತ್ತಿಲ್ಲ ಎಂಬ ಭಾವನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಅಧಿವೇಶನದಲ್ಲಿ ಮಂಡನೆ ಆಗಲಿರುವ ಮಸೂದೆಗಳು:

*2022 ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ

*2022 ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ

*2022 ನೇ ಸಾಲಿನ ಕರ್ನಾಟಕ ಭೂ ಕಂದಾಯ(2 ನೇ ತಿದ್ದುಪಡಿ) ಮಸೂದೆ

* 2022 ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಮಸೂದೆ

Related News

spot_img

Revenue Alerts

spot_img

News

spot_img