ಬೆಂಗಳೂರು: ಮಾರ್ಚ್-09:ಬಡವರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲೆಂದು 2022–23ನೇ ಸಾಲಿನಿಂದ ಮರು ಜಾರಿಗೆ ತಂದಿರುವ ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮಾರ್ಚ್ 31ರವರೆಗೆ ಮೂರನೇ ಬಾರಿ ನೋಂದಣಿಯ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಒರಡಿಸಿದೆ.
ಹೊಸ ಸದಸ್ಯರ ನೋಂದಣಿಗೆ 2023ರ ಫೆ.28 ಕೊನೆಯ ದಿನವಾಗಿತ್ತು. ಈ ಯೋಜನೆ ಅಡಿಯಲ್ಲಿ 30 ಲಕ್ಷ ಸದಸ್ಯರನ್ನು ನೋಂದಾಯಿಸಲು ಗುರಿ ನಿಗದಿಪಡಿಸಲಾಗಿತ್ತು. ಇಲ್ಲಿಯವರೆಗೆ 34.52 ಲಕ್ಷ ಸದಸ್ಯರು ನೊಂದಿಣಿ ಮಾಡಿ ನಿರೀಕ್ಷಿತ ಮಟ್ಟ ಮೀರಿದ್ದರು ಸಹ ಸಾರ್ವಜನಿಕರ ಅನುಕೂಲಕ್ಕಾಗಿ ನೊಂದಣಾ ಅವಧಿಯನ್ನು ವಿಸ್ತರಿಸಲಾಗಿದೆ.
2023ರ ಜನವರಿ 1ರಿಂದ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಫಲಾನುಭವಿಗಳಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ಇದುವರೆಗೆ ಸುಮಾರು ಮೂರು ಸಾವಿರ ಫಲಾನುಭವಿಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಸಹಕಾರ ಇಲಾಖೆ ಜಂಟಿ ಕಾರ್ಯದರ್ಶಿ ಎ.ಸಿ. ದಿವಾಕರ್ ತಿಳಿಸಿದ್ದಾರೆ. ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿಯ ಕೊರತೆಯಿದ್ದು ಈ ಯೋಜನೆಯ ಅಡಿಯಲ್ಲಿ ಸಿಗುವ ಲಾಭಗಳಿಂದ ವಂಚಿತರಾಗುತ್ತಿದ್ದಾರೆ.