Revenue Facts

ಸರ್ಕಾರಿ ಪ್ರಾಥಮಿಕ ಮತ್ತು ಪೌಢ ಶಾಲೆಯ ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ …!

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು 2023-24ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ( Toilets) ನಿರ್ಮಾಣ ಯೋನೆಯ ಅನುದಾನ ಬಿಡುಗಡೆ ಮಾಡಿದೆ.

ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ…! 

2023-24ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ( Government Primary and High Schools)
ಶೌಚಾಲಯ ನಿರ್ಮಾಣ ಯೋಜನೆಯ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಬೇರೆ ಬೇರೆ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹಾತ್ಮಾಗಾಂಧಿ ನರೇಗಾ ಯೋಜನೆ (mahatma gandhi nrega yojana) ಹಾಗೂ ನಗರ ವ್ಯಾಪ್ತಿಯ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಮೂಲಕ ಅನುಷ್ಠಾನಗೊಳಿಸಲು ರಾಜ್ಯ ವಲಯದಿಂದ ಶೌಚಾಲಯ ನಿರ್ಮಾಣಕ್ಕೆ 3000.00 ಲಕ್ಷಗಳ ಅನುದಾನದಲ್ಲಿ 2000.00 ಲಕ್ಷವನ್ನು ಸಂಬಂಧಿಸಿದ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ.

ಚಿಕ್ಕೋಡಿ ಸೇರಿ ಹಲವು ಜಿಲ್ಲೆಗಳಿಗೆ 250 ಲಕ್ಷ ಬಿಡುಗಡೆ…!

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸದರಿ ಲೆಕ್ಕ ಶೀರ್ಷಿಕೆಯಲ್ಲಿ 250.00 ಲಕ್ಷಗಳು ಬಿಡುಗಡೆಯಾಗಿರುತ್ತದೆ ಹೆಚ್ಚಿನ ಶೌಚಾಲಯ ಘಟಕ ಅನುಮೋದನೆಯಾಗಿರುವ ಹಾಗೂ ಕಾಮಗಾರಿ ಪ್ರಗತಿಯಲ್ಲಿರುವ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕೋಡಿ ಜಿಲ್ಲೆಗಳ ಉಪನಿರ್ದೇಶಕರಿಗೆ ತಲಾ ರೂ 50 ಲಕ್ಷಗಳಂತೆ ಬಿಡುಗಡೆ ಮಾಡಿದೆ.

ನಗರ ಪ್ರದೇಶಗಳಲ್ಲಿ ಶೌಚಾಲಯಗಳ ಕಾಮಗಾರಿ ಕೈಗೊಳ್ಳುವ ಜಿಲ್ಲೆಗಳು ಪಿ.ಆರ್.ಇ.ಡಿಯನ್ನು ಅನುಷ್ಠಾನ ಏಜೆನ್ಸಿಯನ್ನಾಗಿ ನಿಗದಿಪಡಿಸಿಕೊಂಡು ಕಾಮಗಾರಿ ಅನುಷ್ಠಾನಗೊಳಿಸುವುದು 2000 ಲಕ್ಷಗಳನ್ನು ಬಿಡುಗಡೆ ಮಾಡಿದ ಅನುದಾನಕ್ಕೂ ಅನ್ವಯಿಸುತ್ತದೆ

Exit mobile version