ಬೆಂಗಳೂರು : ಇಂದು ಹೈಕೋರ್ಟ್(highcourt) ವಿಭಾಗೀಯ ಪೀಠ ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ(Board exam) ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದೆ. ಸ್ಥಗಿತಗೊಂಡಿರುವ ಬೋರ್ಡ್ ಪರೀಕ್ಷೆಗಳನ್ನು ಮುಂದುವರಿಸುವಂತೆ ಆದೇಶಿಸಿದೆ. ಹೀಗಾಗಿ ವಿದ್ಯಾರ್ಥಿಗಳು ಇದೀಗ ಮತ್ತೆ ಪಬ್ಲಿಕ್ ಪರೀಕ್ಷೆ ಬರೆಯಬೇಕಾಗಿದೆ. ಬೋರ್ಡ್ ಪರೀಕ್ಷೆಯನ್ನು ಏಕಸದಸ್ಯ ಪೀಠ ರದ್ದು ಮಾಡಿತ್ತು. ನಂತರ ಈ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿತ್ತು. ಆನಂತರ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ತಡೆ ನೀಡಿ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸೂಚಿಸಿತ್ತು.5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ.ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿ ,ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. .5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ ಅನಿಶ್ಚಿತತೆ ಮುಂದುವರೆದಿತ್ತು.ಪರೀಕ್ಷೆ ರದ್ದಾಗುತ್ತದೆಯೇ ಅಥವಾ ನಡೆಯುತ್ತದೆಯೇ ಎಂಬುದರ ಕುರಿತಾಗಿ ಗೊಂದಲ ಮುಂದುವರೆದಿದ್ದು, ಇದೀಗ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.