Revenue Facts

ಗೃಹಲಕ್ಷ್ಮಿ: ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ. ಚೆಕ್‌ ಮಾಡಿ

ಗೃಹಲಕ್ಷ್ಮಿ: ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ. ಚೆಕ್‌ ಮಾಡಿ

#Grilahakshmi #name #list #beneficiaries #check
ಬೆಂಗಳೂರು;ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು. “ಗೃಹಲಕ್ಷ್ಮಿ’ ಯೋಜನೆಯಡಿ ಈ ವರೆಗೆ 1.08 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಈ ತಿಂಗಳ 30 ರಿಂದ ಎಲ್ಲಾ ನೋಂದಾಯಿತ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ ರೂ. 2,000 ನೇರ ವರ್ಗಾವಣೆ ಮಾಡಲಿದ್ದೇವೆ. ಒಟ್ಟು 1.28 ಕೋಟಿ ಫಲಾನುಭವಿಗಳಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡ 15 ದಿನಗಳಲ್ಲೇ ಕೋಟಿಗೂ ಅಧಿಕ ಮಹಿಳೆಯರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಬಾಕಿ 28 ಲಕ್ಷ ಮಹಿಳೆಯರ ನೋಂದಣಿ ಆಗಬೇಕಿದ್ದು; ಮಹಿಳೆಯರು ಯಾವುದೇ ಶುಲ್ಕ ನೀಡದೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ. ನಾಡಿನ ಎಲ್ಲಾ ಅರ್ಹ ಕುಟುಂಬಗಳಿಗೆ ಯೋಜನೆಯ ಲಾಭ ತಲುಪಿಸಬೇಕೆಂಬ ನಮ್ಮ ಆಶಯಕ್ಕೆ ನಿಮ್ಮ ಬೆಂಬಲವಿರಲಿ ಎಂದು ಸಿಎಂ ಸಿದ್ದರಾಮಯ್ಯ ಕೇಳಿಕೊಂಡಿದ್ದಾರೆ.ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಆಗಸ್ಟ್ 30ರಂದು ಕುಟುಂಬದ ಯಜಮಾನಿಯ ಖಾತೆಗೆ 2000 ರೂ. ಜಮೆ ಆಗಲಿದೆ, ಈ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅನ್ನುವುದನ್ನು ಪರಿಶೀಲಿಸಬಹುದು. ಅದಕ್ಕಾಗಿ ನೀವು ಈ https://ahara.kar.nic.in /WebForms/Show_Village_List.aspx Road ಜಿಲ್ಲೆ, ತಾಲೂಕು ಸೆಲೆಕ್ಟ್ ಮಾಡಿ, ಗ್ರಾಮಪಂಚಾಯತ್ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಬೇಕು. ಫಲಾನುಭವಿಗಳ ಪೇಜ್‌ನಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಖಾತೆಗೆ ಹಣ ಜಮೆ ಆಗಲಿದೆ.

Exit mobile version