Revenue Facts

Gruha Lakshmi;ಗೃಹಲಕ್ಷ್ಮಿ ನೋಂದಣಿಗೆ ಇಂದಿನಿಂದ ಚಾಲನೆ;

ಬೆಂಗಳೂರು: ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಬಹಳ ಮಹತ್ವ ಪಡೆದುಕೊಂಡಿರುವ ಗೃಹಲಕ್ಷ್ಮಿ ಯೋಜನೆ ಮನೆ ಯಜಮಾನಿಗೆ 2,000 ರು. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಯ ನೋಂದಣಿಗೆ ಜುಲೈ 19 ಬುಧವಾರ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿರುವ ಕಾಠ್ಯಕ್ರಮ ದಲ್ಲಿ ಸಿಎಂ ಸಿದ್ದರಾಮಯ್ಯ ನೋಂದಣಿ ಪ್ರಕ್ರಿಯೆ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಮಂಜೂರು ಆದೇಶ ನೀಡಲಿದ್ದು, ಸಚಿವ ಲಕ್ಷ್ಮೀ ಹೆಬ್ಬಾಳ‌ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣ ಗೊಳಿಸಲಿದ್ದಾರೆ. ಶಾಸಕ ರಿಜ್ವಾನ್‌ ಅರ್ಷದ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಅಪ್ಲಿಕೇಶನ್‌ ಬಿಡುಗಡೆ ಮಾಡಲಿದ್ದಾರೆ, ಸಂಜೆಯಿಂದ ಅರ್ಜಿ ಸ್ವೀಕಾರ ಕಾರ್ಯ ಆರಂಭ ಆಗಲಿದೆ.

ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಜೊತೆಗೆ ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.ಅರ್ಜಿ ಸಲ್ಲಿಸಲು ಡೆಡ್‍ಲೈನ್ ಕೂಡ ನಿಗದಿಯಾಗಿಲ್ಲ. ಈ ಯೋಜನೆ ಆಗಸ್ಟ್ 16ರ ನಂತರ ಬಿಪಿಎಲ್ ಕುಟುಂಬದ ಒಡತಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ಹಣ ಜಮೆ ಮಾಡಲಾಗುತ್ತದೆ.ಗೃಹ ಲಕ್ಷ್ಮಿ ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದ್ದು, ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯತೆ ಇಲ್ಲ. ಪಡಿತರ ಚೀಟಿಯ ಸಂಖ್ಯೆಯನ್ನ 81475005೦೦ ಈ ಸಂಖ್ಯೆ ಎಸ್ ಎಂಎಸ್ ಮಾಡಬಹುದು. ಎಂದು ತಿಳಿದು ಬಂದಿದೆ.ಗೊಂದಲವಿದ್ದರೆ ಇಲಾಖೆ 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಸೂಚಿಸಿದ್ದಾರೆ.ಬಾಪೂಜಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕ ಸಂಸ್ಥೆಯ ಕಚೇರಿಗಳು, ಪ್ರಜಾಪ್ರತಿನಿಧಿಯಿಂದ ನೋಂದಣಿ,ಇಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.

ಗೃಹ ಲಕ್ಷ್ಮಿಯೋಜನೆಗೆ ಅಗತ್ಯವಿರುವ ದಾಖಲೆಗಳು

ಕಾಂಗ್ರೆಸ್‌ ಸರ್ಕಾರದ 4ನೇ ಗ್ಯಾರಂಟಿಯಾಗಿರುವ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ನಿಮ್ಮ ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪಡಿತರ ಕಾರ್ಡ್ ಸಂಖ್ಯೆ, ಯಜಮಾನಿ ಮತ್ತು ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ಅಗತ್ಯವಿರುತ್ತದೆ.

 

ಗೃಹ ಲಕ್ಷ್ಮಿಯೋಜನೆಗೆ ಯಾರು ಅರ್ಹರು?

*ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ

*ಫಲಾನುಭವಿ ಮಹಿಳೆ ಅವರ ಪತಿ ಜಿಎಸ್‌ಟಿ ತೆರಿಗೆ ಪಾವತಿದಾರನಾಗಿರಬಾರದು

*ಫಲಾನುಭವಿ ಮಹಿಳೆ ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು

*ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ, ಜಮೆ

*ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು ಪರ್ಯಾಯ ಬ್ಯಾಂಕ್‌ ಖಾತೆಗೆ ಆರ್‌ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜ

Exit mobile version