31.8 C
Bengaluru
Friday, April 12, 2024

Gruha Lakshmi Scheme :ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ಆಗಸ್ಟ್ 30ಕ್ಕೆ ಅಧಿಕೃತ ಚಾಲನೆ

#Gruhalakshmi Scheme #Mysore #lanuched #august30

ಬೆಂಗಳೂರು, ಆ.19:ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ, ಮತ್ತೆ ಮುಂದಕ್ಕೆ ಹೋಗಿದೆ. ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ. ಆ.27ರ ಬದಲು ಆ.30ರಂದು ಮೈಸೂರಿನಲ್ಲಿ(Mysuru) ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar)​ ತಿಳಿಸಿದರು.ಬೆಳಗಾವಿ ಬದಲಿಗೆ ಮೈಸೂರಿನಲ್ಲಿ ಯೋಜನೆಗೆ ರಾಹುಲ್‌ಗಾಂಧಿ ಚಾಲನೆ ನೀಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.ವಿವಿಧ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ದಿನಾಂಕ ಮುಂದೂಡಲಾಗಿದ್ದು, ಈಗ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.

ಕಾರಣಾಂತರಗಳಿಂದ ಸಿಎಂ ಸಿದ್ದರಾಮಯ್ಯರ ತವರು ಜಿಲ್ಲೆಯಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.ಮೈಸೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.ಮೈಸೂರಿನಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದರು.

Related News

spot_img

Revenue Alerts

spot_img

News

spot_img