Revenue Facts

ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು ಜುಲೈ 06:ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳಲ್ಲಿ ಯಜಮಾನಿ ಸ್ಥಾನದಲ್ಲಿ ನಮೂದಿಸಿದ ಪ್ರತಿಯೊಬ್ಬರು ಗೃಹಲಕ್ಷ್ಮಿ ಯೋಜನೆಗೆ ಅರ್ಹರು ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಪತಿ ಹಾಗೂ ಪತ್ನಿ ಆಧಾರ್ ಕಾರ್ಡ್, ಮೊಬೈಲ್ ನಂಬರ್ ಮಾತ್ರ ಸಾಕು.ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು.

 

ಗೂಗಲ್ ಪ್ಲೇ ಸ್ಟೋರ್, ಆ್ಯಪಲ್ ಸ್ಟೋರ್​​​ನಲ್ಲಿ ಆ್ಯಪ್ ಲಭ್ಯವಾಗಲಿದೆ. ಇನ್ನೂ ಸೇವಾಸಿಂಧು ವೆಬ್​​​ಸೈಟ್​​ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ.ಯಜಮಾನಿಯ ಮೊಬೈಲ್ ನಂಬರ್ ಕಡ್ಡಾಯವಾಗಿ ಬೇಕಾಗುತ್ತದೆ. ಬೆಂಗಳೂರು ಒನ್ ಅಥವಾ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಖಾತೆಯೊಂದಿಗೆ ಮೊಬೈಲ್ ನಂ. ಲಿಂಕ್ ಆಗಿರಬೇಕು. ಯಜಮಾನಿ ಅಥವಾ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಮನೆ ಒಡತಿಯ ಯಜಮಾನ ಜಿಎಸ್​ಟಿ ರಿರ್ಟನ್ಸ್ ಮಾಡಿರಬಾರದು ಎಂಬ ಮಾನದಂಡಗಳನ್ನು ಅನುಸರಿಸಲಾಗಿದೆ.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಗೃಹಲಕ್ಷ್ಮಿ ಯೋಜನೆ ಲಾಂಚ್ ಕಾರ್ಯಕ್ರಮ ನಡೆಸಲು ಚಿಂತನೆಗಳು ನಡೆದಿವೆ.ಜುಲೈ 14ರಂದು ಸಾಂಕೇತಿಕವಾಗಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ.ಜುಲೈ 17ರಿಂದ ಪೂರ್ಣ ಪ್ರಮಾಣದಲ್ಲಿ ಯೋಜನೆ ಜಾರಿಗೆ ಬರಲಿದೆ ಎನ್ನಲಾಗಿದೆ. ಸಿಎಂ, ಡಿಸಿಎಂ ಸಮ್ಮುಖದಲ್ಲಿ ಅದ್ಧೂರಿಯಾಗಿ ಯೋಜನೆಗೆ ಚಾಲನೆ ನೀಡಲು ಸಚಿವ ಲಕ್ಷ್ಮೀ ಹೆಬ್ಬಾಳ‌ ಪ್ಲಾನ್‌ ಮಾಡಿದ್ದಾರೆ. ಮೊದಲಿಗೆ ಐವರು ಮಹಿಳೆಯರಿಗೆ ತಲಾ 2 ಸಾವಿರ ರೂಪಾಯಿ ಹಣ ನೀಡುವ ಮೂಲಕ ಯೋಜನೆ ಉದ್ಘಾಟನೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Exit mobile version