Revenue Facts

ಮಣಿಪುರದಲ್ಲಿ ಮತ್ತೆ ಗುಂಡಿನ ಸದ್ದು; ಓರ್ವ ಸಾವು

ಮಣಿಪುರದಲ್ಲಿ ಮತ್ತೆ ಗುಂಡಿನ ಸದ್ದು; ಓರ್ವ ಸಾವು

ಮಣಿಪುರ;ಶಂಕಿತ ಕುಕಿ ಬಂಡುಕೋರರು ಮಣಿಪುರದ  ಜಿಲ್ಲೆಯಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೈತೇಯಿ ಸಮುದಾಯದ ಇಬ್ಬರು ರೈತರು ಸೇರಿದಂತೆ ಏಳು ಮಂದಿಗೆ ಗಾಯಗಳಾಗಿವೆ. ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಅಲ್ಲಲ್ಲಿ ಸಣ್ಣ ಪುಟ್ಟ ಘರ್ಷಣೆಗಳು ನಡೆಯುತ್ತಿವೆ ಅದರಂತೆ ಕುಕಿ-ಜೋ ಗ್ರಾಮದಲ್ಲಿ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದು ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.ಬಂಡುಕೋರರ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದರು ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ಇಂಫಾಲ್ ಕಣಿವೆಯಿಂದ ಕುಕಿ ಪಾಬಲ್ಯದ್ ಬೆಟ್ಟಗಳನ್ನು ಬೇರ್ಪಡಿಸುವ ಬಫರ್ ವಲಯದ ಸಮೀಪದಲ್ಲಿ ಘಟನೆ ನಡೆದಿದೆ. ಈ ಘಟನೆಯ ಬಳಿಕ ಭದ್ರತಾ ಪಡೆಗಳು ತಕ್ಷಣವೇ ಕಾರ್ಯಾಚರಣೆಗೆ ಇಳಿದಿದೆ.ಘಟನೆಗೆ ಸಂಬಂಧಿಸಿ ಕುಕಿ ಜೋ ಗ್ರಾಮದಲ್ಲಿ ಜಿಲ್ಲಾ ಪೊಲೀಸರು, ಅಸ್ಸಾಂ ರೈಫಲ್ಸ್, ಕೇಂದ್ರ ಅರೆಸೇನಾ ಪಡೆ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ದುಷ್ಕರ್ಮಿಗಳ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Exit mobile version