Revenue Facts

ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಒಡಿಶಾದಲ್ಲಿ ಅರೆಸ್ಟ್

ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಒಡಿಶಾದಲ್ಲಿ ಅರೆಸ್ಟ್

ಬೆಂಗಳೂರು;ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸಲು ಹಣ ಪಡೆದ ಪ್ರಕರಣದಲ್ಲಿ ಆರೋಪಿಯಾಗಿರುವ ತಾಲೂಕಿನ ಹಿರೇಹಡಗಲಿ ಗ್ರಾಮದ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಠದ ಅಭಿನವ ಹಾಲವೀರಪ್ಪ ಸ್ವಾಮೀಜಿ ತಲೆಮರಿಸಿಕೊಂಡಿದ್ದರು. ಸದ್ಯ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾದ ಕಟಕ್ ನಲ್ಲಿ ಹಾಲಶ್ರೀ ಅವರನ್ನು ಪೊಲೀಸ್ ಬಂಧಿಸಿದ್ದಾರೆ.ಚೈತ್ರಾ ಕುಂದಾಪುರ ಗ್ಯಾಂಗ್ ಉದ್ಯಮಿ ಗೋವಿಂದ ಪೂಜಾರಿಯವರಿಗೆ ಐದು ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ಬಂಧನ ಸತ್ರ ಆರಂಭವಾಗುತ್ತಲೇ ತಲೆ ಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿಯನ್ನು ಒಡಿಶಾದ ಕಟಕ್‌ನಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.

ಹಾಲಶ್ರೀ ಸ್ವಾಮೀಜಿ ಬಗ್ಗೆ ಕ್ಯೂ ಕೊಟ್ಟಿದ್ದು ರೈಲ್ವೇ ಟಿಕೆಟ್ PNR ನಂಬರ್, ಆದ್ರೆ ಕಟಕ್‌ನಲ್ಲಿ ಬಲೆಗೆ ಬಿದ್ದಿರುವ ಹಾಲಶ್ರೀ ಸ್ವಾಮೀಜಿ ಆ ವೇಳೆ ಕಾವಿಧಾರಿಯಾಗಿರಲಿಲ್ಲ. ಬದಲಾಗಿ ಟೀ ಶರ್ಟ್‌ನಲ್ಲಿದ್ದರು.ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಬಂಕ್ ‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.ಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Exit mobile version