22.6 C
Bengaluru
Saturday, July 27, 2024

ಹಂಪಿ ವಿವಿಯ 32ನೇ ನುಡಿಹಬ್ಬ : ಮೂವರಿಗೆ ನಾಡೋಜ ಪ್ರಶಸ್ತಿ ಪ್ರದಾನ

#Hampi University’s #32nd Nudihabba# Nadoja Award # three

ಬೆಂಗಳೂರು;ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ(Hampi kannada university )ಈ ಬಾರಿ ಮೂವರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ನೀಡಲಾಗುತ್ತದೆ. ಬೀದರ್‌ನ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು, ಆಂಧ್ರಪ್ರದೇಶ ವಿಜಯನಗರದ ಕೇಂದ್ರೀಯ ಬುಡಕಟ್ಟು ವಿಶ್ವ ವಿದ್ಯಾಲಯದ(Central Tribal University) ಕುಲಪತಿ ಪ್ರೊ.ತೇಜಸ್ವಿ ವಿ.ಕಟ್ಟಿಮನಿ, ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಸ್‌.ಸಿ.ಶರ್ಮಾ ಅವರು ಆಯ್ಕೆಯಾಗಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ನುಡಿಹಬ್ಬ(Nudihabba) ಜ.10ರಂದು ನಡೆಯಲಿದ್ದು, ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ತಿಳಿಸಿದರು.ನಾನಾ ವಿಭಾಗದ 264 ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಕ ಸಚಿವ ಡಾ. ಎಂಸಿ ಸುಧಾಕರ್ ಪಿಎಚ್ ಡಿ(Phd) ಪದವಿ ಪ್ರದಾನ ಮಾಡಲಿದ್ದಾರೆ. ವಿವಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚಿನ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಜ. 10ರಂದು ಸಂಜೆ 5 ಗಂಟೆಗೆ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಡಿ.ಲಿಟ್ ಪದವಿ ಪಡೆದದವರಿಗೆ ಹಾಗೂ ಪಿ.ಎಚ್ ಡಿ ಪದವೀಧರರಿಗೆ ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ಎ. ಕೋರಿ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ತಿಳಿಸಿದ್ದಾರೆ.

Related News

spot_img

Revenue Alerts

spot_img

News

spot_img