25.8 C
Bengaluru
Thursday, February 29, 2024

Happy new year: ಮಧ್ಯರಾತ್ರಿ 1 ಗಂಟೆವರೆಗೆ ಸಂಭ್ರಮಾಚರಣೆಗೆ ಅವಕಾಶ; ಮಾರ್ಗಸೂಚಿ ಬಿಡುಗಡೆ

#Happy New Year# Celebrations # allowed till midnight# Release # guidelines

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದರೆ, ಅವರು ಮನೆಯಲ್ಲಿ ಕಡ್ಡಾಯವಾಗಿ ಒಂದು ವಾರ ಐಸೋಲೇಷನ್ ಆಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಸರ್ಕಾರಿ ನೌಕರರಿಗೆ ಸೋಂಕು ತಗುಲಿದರೆ ಅವರಿಗೆ 7 ದಿನ ರಜೆ ಸಹ ನೀಡಲಾಗುತ್ತಿದ್ದು, ಖಾಸಗಿ ಇದ್ದವರಿಗೂ ಒಂದು ನಿಯಮ ಜಾರಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ, ಮಾಸ್ಕ್, ಸೋಷಿಯಲ್ ಡಿಸ್ಟನ್ಸ್, ಸ್ಯಾನಿಟೈಜ‌ರ್ ಅನ್ನು ಕಡ್ಡಾಯವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಕೋವಿಡ್ ಸಂಪುಟ ಉಪಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದರು,ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ. ಜನರೇ ಜನದಟ್ಟಣಿಯಲ್ಲಿ ಸೇರದಂತೆ ತಮ್ಮನ್ನು ತಾವು ಸಾಧ್ಯವಾದಷ್ಟು ನಿರ್ಬಂಧ ಹೇರಿಕೊಳ್ಳಿ ಎಂದರು.

ಹೊಸ ವರ್ಷಾಚರಣೆಗೆ ಬಿಗಿ ಭದ್ರತೆ ಸಂಬಂಧ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

* ಡಿ. 31 ರಂದು ಮಧ್ಯರಾತ್ರಿ 12ರ ತನಕ ವೈನ್‌ಶಾಪ್‌ಗಳು

* ರಾತ್ರಿ 1 ಗಂಟೆ ತನಕ ಕ್ಲಬ್‌ಗಳಿಗೆ ಅವಕಾಶ

* ಹಲವೆಡೆ ಡೋನ್ ಕ್ಯಾಮರಾಗಳ ಕಾರ್ಯಾಚರಣೆ

* ಅನಧಿಕೃತವಾಗಿ ಮದ್ಯ ಶೇಖರಣೆ ಮಾಡುವುದುದು, ಬ್ಲಾಕ್ ನಲ್ಲಿ ಮಾರಾಟ ಮಾಡುವವರ ಮೇಲೆಯೂ ನಿಗಾ ಇರಿಸಲಾಗಿದೆ.

* 48 ಕಡೆಗಳಲ್ಲಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ

* ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಒಬ್ಬರು ಜಂಟಿ ಪೊಲೀಸ್ ಆಯುಕ್ತರು, 15 ಡಿಸಿಪಿ, 160 ಇನ್​ಸ್ಪೆಕ್ಟರ್, 600 ಸಬ್​ ಇನ್​ಸ್ಪೆಕ್ಟರ್, 600 ಎಎಸ್​ಐ, 1,800 ಹೆಡ್​​ ಕಾನ್​​ಸ್ಟೇಬಲ್ ಮತ್ತು 5,200 ಪೊಲೀಸ್ ಕಾನ್​ಸ್ಟೇಬಲ್ ನಿಯೋಜಿಸಲಾಗಿದೆ

* ಬಿಎಂಟಿಸಿ, ನಮ್ಮ ಮೆಟ್ರೋ, ಆರೋಗ್ಯ ಇಲಾಖೆ, ಅಗ್ನಿಶಾಮಕದಳ ಸೇರಿದಂತೆ ಅಗತ್ಯ ಸೇವೆ ಒದಗಿಸುವ ಇಲಾಖೆಗಳ ಜೊತೆ ಮಾತುಕತೆ

*ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ ಪಾರ್ಕ್, ಟ್ರಿನಿಟಿ, ಫಿನಿಕ್ಸ್ ಮಾಲ್, ಕ್ಲಬ್​ಗಳ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಮಾಡಲಾಗುತ್ತದೆ,

Related News

spot_img

Revenue Alerts

spot_img

News

spot_img