ಬೆಂಗಳೂರು: ಮುಟ್ಟುಗೋಲು(Confiscation) ಮಾಡಿದ ವಾಹನ ಬಿಡುಗಡೆಗೆ 25 ಸಾವಿರ ರೂ. ಲಂಚಕ್ಕೆ(Bribe) ಬೇಡಿಕೆ ಇಟ್ಟಿದ್ದ ಹೆಡ್ ಕಾನ್ ಸ್ಟೇಬಲ್ ನ್ನು ಲೋಕಾಯುಕ್ತ(Lokayukta) ಅಧಿಕಾರಿಗಳು ಬಂಧಿಸಿದ್ದಾರೆ.ಹನುಮಂತನಗರ ಠಾಣೆಯ ಹೆಡ್ ಕಾನ್ ಸ್ಟೇಬಲ್ ಕವೀಶ್ ಲೋಕಾಯುಕ್ತ ಬಲೆಗೆ ಬಿದ್ದವರು.ಶ್ರೀನಗರದ ಶಿವಕುಮಾರ್ ಎಂಬವರ ವಾಹನವನ್ನು ಪ್ರಕರಣವೊಂದರಲ್ಲಿ ಪೊಲೀಸರು ಜಪ್ತಿ ಮಾಡಿದ್ದರು. ಆ ವಾಹನ ಬಿಡುಗಡೆ (Vehicle release)ಮಾಡಲು ಹೆಡ್ ಕಾನ್ ಸ್ಟೇಬಲ್ ಕವೀಶ್ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 20 ಸಾವಿರ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಶಿವಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದೂರುದಾರರಿಂದ 20 ಸಾವಿರ ರೂ. ಲಂಚ ಪಡೆಯುವಾಗ ಹೆಡ್ ಕಾನ್ ಸ್ಟೇಬಲ್ ಕವೀಶ್ ರನ್ನು ಬಂಧಿಸಿದ್ದಾರೆ. ಈ ಕುರಿತು ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.
ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ
![ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ](https://revenuefacts.com/wp-content/uploads/2022/11/lokayukta.webp)