Revenue Facts

ಆರ್ಟಿಕಲ್ 370 ರದ್ದತಿಗಾಗಿ ಆಗಸ್ಟ್ 2 ರಿಂದ ಅರ್ಜಿಗಳ ವಿಚಾರಣೆ

ಆರ್ಟಿಕಲ್ 370 ರದ್ದತಿಗಾಗಿ ಆಗಸ್ಟ್ 2 ರಿಂದ ಅರ್ಜಿಗಳ ವಿಚಾರಣೆ

ನವದೆಹಲಿ;ಜಮ್ಮುಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ತಿಳಿದು ಬಂದಿದೆ. ಸಿಜೆಐ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠವು ಮಂಗಳವಾರ ಇವುಗಳನ್ನು ಪರಿಶೀಲಿಸಿದ್ದು,ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಸಂವಿಧಾನ ಪೀಠವು ಜುಲೈ 27 ರೊಳಗೆ ಎಲ್ಲಾ ದಾಖಲೆಗಳು, ಸಂಕಲನಗಳು ಮತ್ತು ಲಿಖಿತ ಸಲ್ಲಿಕೆಗಳನ್ನು ಸಲ್ಲಿಸಬೇಕು ಎಂದು ಹೇಳಿದೆ. ಆಗಸ್ಟ್ 2 ರಿಂದ ಪೂರ್ಣ ಪ್ರಮಾಣದ ವಿಚಾರಣೆ ನಡೆಸಲಾಗುವುದು ಎಂದು ಘೋಷಿಸಿತು.ಆಗಸ್ಟ್ 5, 2019 ರಂದು ಆರ್ಟಿಕಲ್ 370 ಅನ್ನು ರದ್ದುಗೊಳಿಸಲಾಗಿತ್ತು ಮತ್ತು ಜಮ್ಮು ಮತ್ತು ಕಾಶ್ಮೀರವನ್ನು 2 ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ.

Exit mobile version