Revenue Facts

ದೇಶದ ಮೊದಲ ದಲಿತ ಮಾಹಿತಿ ಆಯುಕ್ತ ಹೀರಾಲಾಲ್ ಸಾಮರಿಯಾ ಅಧಿಕಾರ ಸ್ವೀಕಾರ

ದೇಶದ ಮೊದಲ ದಲಿತ ಮಾಹಿತಿ ಆಯುಕ್ತ  ಹೀರಾಲಾಲ್ ಸಾಮರಿಯಾ ಅಧಿಕಾರ ಸ್ವೀಕಾರ

# Heeralal Samaria #assumes #charge #country’s # Dalit #Information #Commissioner

ಬೆಂಗಳೂರು;ದೇಶದ ಮೊದಲ ದಲಿತ ಮಾಹಿತಿ ಆಯುಕ್ತ ರಾಜಸ್ಥಾನದ ಹೀರಾಲಾಲ್ ಸಮರಿಯಾ ಅವರು ಮುಖ್ಯ ಮಾಹಿತಿ ಆಯುಕ್ತರಾಗಿದ್ದಾರೆ.ವೈಕೆ ಸಿನ್ಹಾ ಅವರ ಅಧಿಕಾರಾವಧಿ ಅಕ್ಟೋಬರ್ 3 ರಂದು ಕೊನೆಗೊಂಡ ನಂತರ ಈ ಉನ್ನತ ಹುದ್ದೆ ಖಾಲಿಯಾಗಿತ್ತು. ರಾಷ್ಟ್ರಪತಿ ದೌಪದಿ ಮುರ್ಮು ಅವರು ಹೀರಾಲಾಲ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. 1985ರ ಬ್ಯಾಚಿನ IAS ಅಧಿಕಾರಿಯಾದ ಇವರು ದೇಶದ ಮೊದಲ ದಲಿತ ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿದ್ದಾರೆ. ಇದುವರೆಗೆ ಮಾಹಿತಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೇ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿಭಾಯಿಸಿದ್ದಾರೆ.ಸಾಮರಿಯಾ ಅವರು ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡ ನಂತರ ಎಂಟು ಮಾಹಿತಿ ಆಯುಕ್ತರ ಹುದ್ದೆಗಳು ಖಾಲಿ ಇವೆ.ಅಕ್ಟೋಬರ್ 30 ರಂದು ಸುಪ್ರೀಂ ಕೋರ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದ ನಂತರ ನೇಮಕ ಪ್ರಕ್ರಿಯೆ ನಡೆದಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಮಂಜೂರಾದ ಹುದ್ದೆಗಳು, ರಾಜ್ಯ ಮಾಹಿತಿ ಆಯೋಗಗಳಲ್ಲಿನ ಖಾಲಿ ಹುದ್ದೆಗಳು ಮತ್ತು ಅಲ್ಲಿ ಬಾಕಿ ಉಳಿದಿರುವ ಒಟ್ಟು ಪ್ರಕರಣಗಳು ಸೇರಿದಂತೆ ಹಲವು ಅಂಶಗಳ ಕುರಿತು ಎಲ್ಲಾ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಲು ಡಿಒಪಿಟಿಗೆ ಸೂಚಿಸಿತ್ತು.

Exit mobile version