ಬೆಂಗಳೂರು: ಭ್ರಷ್ಟಾಚಾರದ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅ೦ದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಸಂಬಂಧ ಹಿ೦ದೆ ವಿರೋಧ ಪಕದ ನಾಯಕರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಧಾರವಾಡ ಪೀಠ, ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ತಡೆ ನೀಡಿತು. ಅಲ್ಲದೇ, ಸರ್ಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ.